ಬೆಂಗಳೂರು:- ತಿರುಪತಿ ಲಡ್ಡು ವಿವಾದ ಹಿನ್ನೆಲೆ, ಇಂದು ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ಶುದ್ದಿಕರಣ ನಡೆಯಲಿದ್ದು, ಇಂದು ಭಕ್ತದಿಗಳಿಗೆ ದೇವರ ದರ್ಶನಕ್ಕೆ ಬ್ರೇಕ್ ಹಾಕಲಾಗಿದೆ.
ಬಿಬಿಎಂಪಿ ಮೈದಾನದ ಗೇಟ್ ಬಿದ್ದು ಬಾಲಕ ಸಾವು ಪ್ರಕರಣ: ಓರ್ವ ಅಧಿಕಾರಿ ಸಸ್ಪೆಂಡ್!
ತಿರುಪತಿ ಲಡ್ಡುವಿನಲ್ಲಿ ಮಾಂಸದ ಕೊಬ್ಬು ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ವಿವಾದ ಹಿನ್ನೆಲೆ ಸಧ್ಯ ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ದಕ್ಕೆಯಾಗಿದೆ. ಇದನ್ನ ಕೊಂಚಮಟ್ಟಿಗಾದ್ರು ಸರಿಪಡಿಸುವ ಸಲುವಾಗಿ ನಿನ್ನೆ ತಿರುಪತಿಯಲ್ಲಿ ಶಾಂತಿ ಹೋಮ ಮಾಡಿ ಪಂಚಗವ್ಯ ಸಂಪೋಕ್ಷಣೆ ಮಾಡಲಾಗಿದೆ.
ಅದರಂತೆ ಇಂದು ಬೆಂಗಳೂರು ನಗರದ ಟಿಟಿಡಿ ದೇವಸ್ಥಾನದಲ್ಲೂ ಶುದ್ಧೀಕರಣಕ್ಕೆ ಅಣಿ ಮಾಡಿದ್ದು, ಇಂದು ಬೆಳ್ಳಗ್ಗೆಯಿಂದ ಆರಂಭವಾಗಲಿದೆ. ಇನ್ನು ಇಂದು ಶುದ್ದೀಕರಣ ಮಾಡಿ ಇದೇ ಶುಕ್ರವಾರದಿಂದ ಭಾನುವಾರದವರೆಗೂ ಪವಿತ್ರೋತ್ಸವ ಮಾಡಲಾಗುತ್ತಿದೆ. ಈ ಪವಿತ್ರತ್ರೋತ್ಸೋವಕ್ಕೆ ತಿರುಪತಿಯಿಂದಲೇ ಅರ್ಚಕರುಗಳು ಬರಲಿದ್ದು, ಟಿಟಿಡಿ ದೇವಸ್ಥಾನವನ್ನ ಸಂಪೂರ್ಣವಾಗಿ ಶುದ್ದೀಕರಸಿ, ವಿಶೇಷ ಪೂಜೆಗಳು ನೆರೆವೇರಿಸಲಾಗುತ್ತಿದೆ.
ಮತ್ತೊಂದೆಡೆ ಮುಜುರಾಯಿ ದೇವಸ್ಥಾನಗಳ ಮೇಲೂ ಈ ಎಫೆಕ್ಟ್ ಬೀರಿದ್ದು, ಮುಜುರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ಇನ್ಮುಂದೆ ಫುಡ್ ಟೆಸ್ಟಿಂಗ್ ಕಡ್ಡಾಯ ಮಾಡಲಾಗಿದೆ. ಸಧ್ಯ ಮುಜುರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಒಟ್ಟು 30 ಸಾವಿರ ದೇವಸ್ಥಾನಗಳಿದ್ದು, ಪ್ರಸಾದವನ್ನ ದೇವಸ್ಥಾನಗಳಲ್ಲಿ ತಯಾರಿ ಮಾಡಲಾಗುತ್ತಿದೆ.