ಬೆಂಗಳೂರು:- ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಲಡ್ಡು ವಿವಾದ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ಇಂದು ಭಕ್ತರಿಗಿಲ್ಲ ದರ್ಶನ!
ತುಮಕೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ