ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದರು. ಅದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇದೀಗ ಹೈಕೋರ್ಟ್ ವಜಾಗೊಳಿಸಿದ್ದು, ರಾಜ್ಯಪಾಲರ ಆದೇಶವನ್ನು ಕೋರ್ಟ್ ಎತ್ತಿ ಹಿಡಿದಿದೆ. ಈ ಹಿನ್ನಲೆ ಸಿಎಂ ರಾಜೀನಾಮೆಗೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಬಿಜೆಪಿ ಕರೆ ನೀಡಿದೆ.
ಇತ್ತ ಹುಬ್ಬಳ್ಳಿಯ ಅರವಿಂದ ನಗರ ಬಳಿ ಇರುವ ಬಿಜೆಪಿ ಕಚೇರಿ ಬಳಿ ಬಿಜೆಪಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.
ತನಿಖೆಗೆ ಹೈಕೋರ್ಟ್ ಅಸ್ತು ಹಿನ್ನೆಲೆ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಮೈಸೂರು ಬಿಜೆಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಮಾಡುತ್ತಿದೆ. ಈ ವೇಳೆ ಮಾತನಾಡಿದ ನಾರಾಯಣಸ್ವಾಮಿ, ‘ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು. ಕೋರ್ಟ್ಗೆ ಹೋಗಿ ನಿರ್ದೋಷಿ ಎಂದು ತೀರ್ಪು ಬಂದ ಮೇಲೆ ಮತ್ತೆ ಅಧಿಕಾರಕ್ಕೆ ಬನ್ನಿ. ಮೊದಲು ನ್ಯಾಯಾಲಯದ ತೀರ್ಪು ಎತ್ತಿ ಹಿಡಿಯುವ ಕೆಲಸ ಮಾಡಿ ಎಂದಿದ್ದಾರೆ.