ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಸಿಕ್ಯೂಷನ್ ಅನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನೆಡೆಯಾಗಿದೆ. ಇದರಿಂದ ಸಿಎಂ ಸಿದ್ದಾರಾಮಯ್ಯ ಟೆನ್ಷನ್ ಆಗಿದ್ದು, ಬುಧವಾರ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.
ಶಾಸಕಾಂಗ ಪಕ್ಷದ ಸಭೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ 12:30ಕ್ಕೆ ವಿಧಾನಸೌಧದಲ್ಲಿ ಸಚಿವ ಸಂಪುಟ ನಡೆಸಲಿದ್ದಾರೆ. ರಾಜ್ಯಪಾಲರು ಬೇರೆ ಬೇರೆ ಪ್ರಕರಣಗಳಲ್ಲಿ ವರದಿ ಕೇಳಿ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರಗಳಿಗೆ ಹೇಗೆ ಉತ್ತರ ಕೊಡಬೇಕೆಂಬುವುದರ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.