ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಈ ತೀರ್ಪಿನಿಂದ ಗೊಂದಲಕ್ಕೆ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷ ಮತ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಹೈಕೋರ್ಟ್ ತೀರ್ಪು ಬರುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಸಚಿವರು ದೌಡಾಯಿಸಿದ್ದಾರೆ. ಕಾನೂನು ಸಚಿವ ಹೆಚ್ ಕೆ ಪಾಟೀಲ್, ಸಚಿವರಾದ ಶಿವರಾಜ್ ತಂಗಡಗಿ, ಕೃಷ್ಣಭೈರೇಗೌಡ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೆರಳಿದ್ದಾರೆ.