ದಕ್ಷಿಣ ಕನ್ನಡ:– ಕಾಸ್ಮೆಟಿಕ್ ಸರ್ಜರಿ ವೇಳೆ ಎಡವಟ್ಟು ಆಗಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಯುವಕ ಸಾವನ್ನಪ್ಪಿದ ಘಟನೆ ಮಂಗಳೂರಿನ ಕಂಕನಾಡಿಯ ಬೆಂದೂರ್ ವೆಲ್ನಲ್ಲಿ ಕಾಸ್ಮೆಟಿಕ್ ಸರ್ಜರಿ ವೇಳೆ ಜರುಗಿದೆ.
Dharavada: ಹಳ್ಳಿ ಹುಡುಗಿ ಜಯಶ್ರೀ ತಳವಾರ ಉಡಿಗೆ ಒಂಬತ್ತು ಚಿನ್ನದ ಪದಕ!
32 ವರ್ಷದ ಮೊಹ್ಮದ್ ಮಾಝಿನ್ ಮೃತ ರ್ದುದೈವಿ ಎನ್ನಲಾಗಿದೆ. ಉಳ್ಳಾಲದ ಅಕ್ಕರೆಕೆರೆ ನಿವಾಸಿಯಾದ ಮೊಹಮ್ಮದ್ ಮಾಝಿನ್, ತನ್ನ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲು ಬೆಂದೂರ್ ವೆಲ್ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪರೆಂಟ್ ಕ್ಲಿನಿಕ್ಗೆ ಬಂದಿದ್ದ.
ಅರ್ಧ ಗಂಟೆಯಲ್ಲಿ ಮುಗಿಯಬಹುದಾಗಿದ್ದ ಸಣ್ಣ ಶಸ್ತ್ರಚಿಕಿತ್ಸೆ, ಸಂಜೆಯಾದರೂ ಮುಗಿಯದ ಹಿನ್ನೆಲೆ ಅನುಮಾನಗೊಂಡ ಮಾಝಿನ್ ಮನೆಯವರು, ಸಂಶಯಗೊಂಡು ವಿಚಾರಿಸಿದಾಗ ಆರೋಗ್ಯದಲ್ಲಿ ಏರುಪೇರು ಆಗಿರುವ ಮಾಹಿತಿ ಬೆಳಕಿಗೆ ಬಂದಿದೆ.
ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಮಾಝಿನ್ ಅವರನ್ನು ದಾಖಲು ಮಾಡಲಾಗಿದೆ. ಬಳಿಕ ಪರೀಕ್ಷಿಸಿದ ವೈದ್ಯರು ಮಾಝಿನ್ ಮೃತಪಟ್ಟಿರುವ ಬಗ್ಗೆ ತಿಳಿಸಿದ್ದಾರೆ.