ಬೆಂಗಳೂರು:- ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಕೊಡಲ್ಲ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಯಲಹಂಕದಲ್ಲಿ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ ಮಾಡಿ ಬಳಿಕ ಮಾತನಾಡಿದ ಸಿಎಂ, ನಾನು ರಾಜೀನಾಮೆ ಕೊಡಬೇಕಾ ಎಂದು ಕಾರ್ಯಕ್ರಮದಲ್ಲಿ ನೆರೆದಿದ್ದವರನ್ನು ಕೇಳಿದ ಸಿದ್ದರಾಮಯ್ಯ ನಾನು ರಾಜೀನಾಮೆ ಕೊಡಲ್ಲ, ನಾನು ಫೈಟ್ ಮಾಡುತ್ತೇನೆ ಎಂದರು.
CM ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ: ಜೋಶಿ!
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಪ್ರಾಸಿಕ್ಯೂಷನ್ಗೆ ನೀಡಿದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಗಳು ವ್ಯಕ್ತವಾಗುತ್ತಿವೆ. ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.