ಮಂಡ್ಯ :- ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವಾಹನ ಚಾಲಕ ಹಾಗೂ ಕ್ಲೀನರ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮದ್ದೂರು ತಾಲೂಕಿನ ಅಗರಲಿಂಗನದೊಡ್ಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದ್ದು, ತಕ್ಷಣವೇ ಗಾಯಾಳುಗಳನ್ನು ಸ್ಥಳೀಯರು ಹಾಗೂ ವಾಹನ ಸವಾರರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳನ್ನು ಮೈಸೂರಿನ ಇಲವಾಲದವರು ಎಂದು ತಿಳಿದು ಬಂದಿದೆ.
ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಬೋಲೇರೋ ವಾಹನ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿ ಹೊಡೆದಿದೆ. ವಾಹನದಲ್ಲಿದ್ದ ಚಾಲಕ ಮತ್ತು ಕ್ಲೀನರ್ ಇಬ್ಬರಿಗೂ ಕೈ, ಕಾಲು ಮತ್ತು ಇತರೇ ಭಾಗಗಳಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು,
ವಿಶ್ವದ ಅತ್ಯಂತ ಅಪಾಯಕಾರಿ ನದಿಗಳು ಯಾವುವು ಗೊತ್ತಾ.? ಇವುಗಳತ್ತ ಹಾದು ಹೋಗುವುದು ಕೂಡಾ ಡೇಂಜರ್
ಸ್ಥಳಕ್ಕೆ ಮದ್ದೂರು ಪೋಲೀಸರು ಭೇಟಿ ನೀಡಿ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಟೋಮೋಟ ಕ್ರೇಟ್ ಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಮದ್ದೂರು ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ವರದಿ : ಗಿರೀಶ್ ರಾಜ್ ಮಂಡ್ಯ