ಬೆಂಗಳೂರು: ಮುಡಾ ಟೆನ್ಷನ್ ನಡುವೆ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಇಂದು ಸರ್ಕಾರದ ವತಿಯಿಂದ ವಿವಿಧ ನೇಮಕಾತಿ ಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದರು
ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು ವಿಧಾನಸೌಧದ ಕಮಿಟಿ ರೂಂನಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿ ಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
ಈ ವೇಳೆ ಸಭೆಯಲ್ಲಿ ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್.ಕೆ. ಪಾಟೀಲ, ಈಶ್ವರ್ ಖಂಡ್ರೆ, ಕೆ. ಸುಧಾಕರ್, ಡಾ. ಎಂ.ಸಿ. ಸುಧಾಕರ್, ಎನ್.ಎಸ್. ಬೋಸರಾಜು, ಪ್ರಿಯಾಂಕ ಖರ್ಗೆ, ಡಿ.ಸುಧಾಕರ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.