ಮಂಡ್ಯ: ಸಿಎಂ ಪ್ರಾಸಿಕ್ಯೂಶನ್ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ, ನಾನು ಸಿಎಂ ರಾಜೀನಾಮೆ ಸಹ ಕೇಳೊಲ್ಲ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇದೇ ವೇಳೆ ಯಾವುದೇ ತೀರ್ಮಾನ ಆಗದೇ ಇದ್ದರೂ ನನ್ನನ್ನು ಆರೋಪಿ ಮಾಡುತ್ತಿದ್ದಾರೆ. ನನ್ನ ಮೇಲಿನ ಆರೋಪ ಎಲ್ಲಾ ಮುಗಿಯಲಿ, ಅದೆಲ್ಲಾ ಮುಗಿದ ಮೇಲೆ ಮಾತಮಾಡುತ್ತೇನೆ ಎಂದು ಗುಡುಗಿದ್ದಾರೆ.
ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು. ಪಾದಯಾತ್ರೆಯಲ್ಲಿ ನಾನು ಜನರನ್ನು ಜಾಗೃತರನ್ನಾಗಿ ಮಾಡುವ ಕೆಲಸ ಮಾಡಿದ್ದೇನೆ. ಬಿಜೆಪಿ ನಾಯಕರ ಜತೆ ಹೆಜ್ಜೆ ಹಾಕಿದ್ದೇನೆ. ಆದರೆ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿಲ್ಲ . ಇರುವ ಪರಿಸ್ಥಿತಿಯನ್ನು ಜನರ ಮುಂದೆ ಹೇಳಿದ್ದೇನೆ ಅಷ್ಟೇ ಎಂದರು.
Sampige: ದೇವರ ಪಾದ ಸೇರೋ ಈ ಹೂವು ಹಲವು ರೋಗ ನಿವಾರಿಸುವ ಔಷಧವೂ ಹೌದು!
ದೇಶದ ಕಾನೂನನಲ್ಲಿ ರಕ್ಷಣೆ ಕೊಡಲು ಸಂವಿಧಾನದಲ್ಲಿ ಅವಕಾಶ ಇದೆ. ಕಾನೂನು ಬಾಹಿರ ಚಟುವಟಿಕೆ ಮಾಡಿದ್ದರೆ ಏನು ತೀರ್ಪು ಬೇಕು ಅದು ನ್ಯಾಯಾಲಯ ಕೊಡುತ್ತದೆ. ಕಾನೂನಿನ ಒಳಗೆ ಇದ್ದರೆ ಏನು ಬೇಕಾದರೂ ಆಗಬಹುದು ಎಂದು ಸಚಿವರು ಹೇಳಿದರು.
ನಾನು ಸಿದ್ದರಾಮಯ್ಯ ಅವರಿಗೆ ಏನೂ ಹೇಳಲ್ಲ. ನನ್ನ ಅಭಿಪ್ರಾಯ ನಾನು ಹೇಳಲ್ಲ. ಕುಮಾರಸ್ವಾಮಿ ಏನೋ ಮಾಡಿದ್ದಾನೆ ಎಂದು ಹೇಳಿದ್ದಾರೆ. ನನ್ನ ನೈತಿಕತೆ ಏನು ಅನ್ನೊದು ಕ್ಲಿಯರ್ ಆಗಬೇಕು. ಗ್ರೇಟ್ ಪಾಲಿಟಿಷಿಯನ್ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ, ಮಾಡಲಿ, ಉತ್ತರ ಕೊಡುತ್ತೇನೆ. ಪ್ರಾಸಿಕ್ಯೂಷನ್ ಪ್ರಕರಣ ಕ್ಲಿಯರ್ ಆದ ಬಳಿಕ ಮಾತನಾಡುತ್ತೇನೆ ಎಂದು ಅವರು ತಿಳಿಸಿದರು.