ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ಹೊರಡಿಸಿದೆ. ಹೀಗಾಗಿ ಸಿದ್ದರಾಮಯ್ಯ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸದ್ಯ ಈ ವಿಚಾರವಾಗಿ ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ವಸಂತ ಕುಮಾರ್ ಪ್ರತಿಕ್ರಿಯಿಸಿದ್ದು, ಸಿಎಂ ಸ್ಥಾನದಲ್ಲಿ ಮುಂದುವರೆದರೆ ಪ್ರಾಮಾಣಿಕ ತನಿಖೆಯಾಗಲ್ಲ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಿದಾಗ ಎಫ್ಐಆರ್ ದಾಖಲಿಸಿ ತನಿಖೆ ಆಗಬೇಕು, ಅರೆಸ್ಟ್ ಕೂಡ ಮಾಡಬಹುದು ಎಂದಿದ್ದಾರೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಉತ್ತಮ ಆದೇಶ ಕೊಟ್ಟಿದೆ. ನಿನ್ನೆ ಹೈಕೋರ್ಟ್ ಕೊಟ್ಟ ತೀರ್ಪಿನ ಆದೇಶದ ಪ್ರತಿಯನ್ನು ನೀಡಿದ್ದೆವು. ಖಾಸಗಿ ದೂರಿಗೆ ನ್ಯಾಯ ಸಿಕ್ಕಿದೆ. 3 ತಿಂಗಳೊಳಗೆ ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತಗೆ ಸೂಚನೆ ನೀಡಲಾಗಿದೆ. ಪ್ರಾಮಾಣಿಕವಾಗಿ ತನಿಖೆ ಆಗಬೇಕು ಅಂತಾ ಮನವಿ ಮಾಡುತ್ತೇವೆ ಎಂದಿದ್ದಾರೆ.