ನವದೆಹಲಿ: ಕಾಂಗ್ರೆಸ್ ಆಡಳಿತ ಮಾಡಿದ ಯಾವ ರಾಜ್ಯವೂ ಅಭಿವೃದ್ಧಿಯಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಹೈಕಮಾಂಡ್ ಭ್ರಷ್ಟವಾದಾಗ ಕೆಳಗೆ ಇರುವವರಿಗೆ ಲೂಟಿ ಹೊಡೆಯಲು ಪರವಾನಿಗೆ ನೀಡಿದಂತಾಗಲಿದೆ. ಕಾಂಗ್ರೆಸ್ ಆಡಳಿತ ಮಾಡಿದ ಯಾವ ರಾಜ್ಯವೂ ಅಭಿವೃದ್ಧಿಯಾಗಿಲ್ಲ ಎಂದಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಆಗಿದೆ. ಅಲ್ಲಿ ಯಾವ ಪರಿಸ್ಥಿತಿ ನಿರ್ಮಾಣವಾಗಿದೆ ನೋಡಿ. ಖುದ್ದು ಅಲ್ಲಿಯ ಮುಖ್ಯಮಂತ್ರಿ ವಿರುದ್ಧ ಭೂ ಹಗರಣದ ಆರೋಪ ಕೇಳಿ ಬಂದಿದೆ, ಹೈಕೋರ್ಟ್ ಚಾಟೀ ಬೀಸಿ ತನಿಖೆಗೆ ಆದೇಶಿಸಿದೆ ಎಂದು ತಿವಿದಿದ್ದಾರೆ.
Urdu is Compulsory: ಇದೇನಿದು ಕರ್ನಾಟಕ ಸರ್ಕಾರದ ಹೊಸ ನಿಯಮ.? ಅಂಗನವಾಡಿ ಉದ್ಯೋಗಕ್ಕೆ ಉರ್ದು ಕಡ್ಡಾಯವಂತೆ!
ಕರ್ನಾಟಕ ಸಿಎಂ ವಿರುದ್ಧ ಭೂ ಹಗರಣ ಆರೋಪ ಕೇಳಿ ಬಂದು, ಅದರ ತನಿಖೆ ಶುರುವಾಗುತ್ತಿದ್ದಂತೆಯೇ ಹೈಕೋರ್ಟ್ಗೆ ಹೋಗಿದ್ದರು. ಹೈಕೋರ್ಟ್ ಕೂಡ ಅವರಿಗೆ ಛಾಟಿ ಬೀಸಿದೆ. ಮಂಗಳವಾರ ಹೈಕೋರ್ಟ್ ತನಿಖೆಗೆ ಆದೇಶ ಮಾಡಿದೆ. ಸಿದ್ದರಾಮಯ್ಯ ವಿರುದ್ಧ ತನಿಖೆ ಆಗಲೇಬೇಕು. ಹೀಗೆ ಭ್ರಷ್ಟಾಚಾರ ಮಾಡಿದವರಿಗೆ ಹರಿಯಾಣದಲ್ಲಿ ಅವಕಾಶ ಕೊಡ್ತಿರಾ? ಎಂದು ಮೋದಿ ಪ್ರಶ್ನಿಸಿದ್ದಾರೆ.