ಧಾರವಾಡ:- ಧಾರವಾಡದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ದೊಡ್ಡ ಗೋಲ್ಮಾಲ್ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಕೆಯಾಗಿದೆ.
Muda Scam: ಸಿಬಿಐ ಎಂಟ್ರಿಗೆ ಕಡಿವಾಣ ಹಾಕಿದ ರಾಜ್ಯ ಸರ್ಕಾರ; ಮುಡಾ ಕೇಸ್ ನಲ್ಲಿ ಸೇಫ್ ಆಗ್ತಾರಾ ಸಿದ್ದರಾಮಯ್ಯ!
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ ಐದು ಗ್ಯಾರಂಟಿಗಳನ್ನು ರಾಜ್ಯದ ಜನತೆಗೆ ನೀಡಿ ಅಧಿಕಾರದ ಚುಕ್ಕಾಣಿ ಹಿಡಿಯಿತು. ಅಧಿಕಾರಕ್ಕೆ ಬಂದ ನಂತರ ಪಂಚ ಗ್ಯಾರಂಟಿಗಳನ್ನೇನೋ ಜಾರಿಗೆ ಮಾಡಿತು. ಆ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ದೊಡ್ಡ ದೊಡ್ಡ ಸಮಾವೇಶಗಳನ್ನು ರಾಜ್ಯ ಸರ್ಕಾರ ಮಾಡಿತು. ಆ ಸಮಾವೇಶಗಳು ಧಾರವಾಡ ಜಿಲ್ಲೆಯಲ್ಲೂ ನಡೆದಿದ್ದವು. ಆದರೆ, ಆ ಸಮಾವೇಶಗಳಲ್ಲಿ ಗೋಲ್ಮಾಲ್ ನಡೆದಿದ್ದು, ಅದರ ಸಂಪೂರ್ಣ ತನಿಖೆ ನಡೆಸುವಂತೆ ಧಾರವಾಡ ಜಿಲ್ಲೆಯ ನವಲಗುಂದದ ಆರ್ಟಿಐ ಕಾರ್ಯಕರ್ತ ಮಾಬುಸಾಬ್ ಯರಗುಪ್ಪಿ ಇದೀಗ ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.