ಬೆಂಗಳೂರು:- ಸಿಬಿಐ ತರಹದ ಸಂಸ್ಥೆಗಳನ್ನು ಕೇಂದ್ರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
Hubballi: ಶ್ರೀರಾಮ ಸೇನೆ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ವಿಜಯೋತ್ಸವ!
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ದುರುಪಯೋಗ ಆಗುವುದನ್ನು ತಡೆಯಲು ಸಿಬಿಐಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ ಎಂದರು.
ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರ ಎಲ್ಲರ ಮೇಲೆ ಮುಗಿಬೀಳ್ತಿದೆ. ಕೇಂದ್ರ ಸರ್ಕಾರ ತನ್ನ ಕೆಲಸ ಮಾಡಬೇಕು. ಇದು ಒಕ್ಕೂಟ ವ್ಯವಸ್ಥೆ. ಸಿಬಿಐ ತರಹದ ಸಂಸ್ಥೆಗಳ ದುರುಪಯೋಗ ಆಗ್ತಿದೆ. ಹೀಗಾಗಬಾರದು ಎನ್ನುವ ಕಾರಣಕ್ಕೆ ಸಿಬಿಐಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ ಎಂದು ಹೇಳಿದ್ದಾರೆ.
ಇನ್ನೂ ಕೋಳಿವಾಡ ಹೇಳಿಕೆ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಇದ್ದಾಗ ತನಿಖಾ ಸಂಸ್ಥೆಗಳ ದುರುಪಯೋಗ ಆಗಿರಲಿಲ್ಲ, ಈಗ ಆಗ್ತಿದೆ. ಕೋಳಿವಾಡ ಅವರು ಯಾಕೆ ಆ ರೀತಿ ಹೇಳಿದರು ಎನ್ನುವುದನ್ನು ಅವರೇ ಹೇಳಬೇಕು. ಎಲ್ಲರನ್ನೂ ಕಂಟ್ರೋಲ್ ಮಾಡಕ್ಕಾಗಲ್ಲ. ಸಿದ್ದರಾಮಯ್ಯ ಜತೆ ನಮ್ಮ ಸಚಿವರು, ಶಾಸಕರು, ಹೈಕಮಾಂಡ್ವರು ಇದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯೇ ಇಲ್ಲ. ಸಿಎಂ ರಾಜೀನಾಮೆ ಕೊಡಲ್ಲ, ಅವರೇ ಮುಂದುವರೀತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.