ಹುಬ್ಬಳ್ಳಿ– ಧಾರವಾಡ ಪೊಲೀಸ್ ಆಯುಕ್ತರಾಗಿ ಸೇವೆಗೈದಿದ್ದ ದಕ್ಷ ಅಧಿಕಾರಿ ಬಿ.ಜಿ.ಕೊಕಟನೂರ್ (79) ಇವರು ಧಾರವಾಡದ ತಮ್ಮ ಸ್ವಗೃಹದಲ್ಲಿ ಕೊನೆ ಉಸಿರು ಎಳೆದಿದ್ದಾರೆ.1998-99 ರಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದ ಅವರು ತಮ್ಮ ಸೇವಾ ಅವಧಿಯಲ್ಲಿ ದಕ್ಷ ಅಧಿಕಾರಿ ಎಂಬ ಬಿರುದು ಪಡೆದುಕೊಂಡಿದ್ದರು.
Ghee Test: ನೀವು ಖರೀದಿಸುವ ತುಪ್ಪ ಅಸಲಿಯೋ, ನಕಲಿಯೋ..? ಹೀಗೆ ಪರೀಕ್ಷಿಸಿ ನೋಡಿ
ಮೃತರ ಅಂತ್ಯಕ್ರಿಯೆಯು ಅವರ ತವರೂರಾದ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದಲ್ಲಿ ನಾಳೆ 27 ರಂದು ಮಧ್ಯಾಹ್ನ ನಡೆಯಲಿದ್ದು, ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು-ಬಳಗ ಅಗಲಿದ್ದಾರೆ. ಹಲವು ರಾಜಕೀಯ ಮುಖಂಡರು ಹಾಗೂ ಹು-ಧಾ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಅವರು ಮೃತರ ಅಂತಿಮ ದರ್ಶನ ಪಡೆಯುವ ಸಾಧ್ಯತೆಯಿದ್ದು, ಹು- ಧಾ ಕಮೀಷನರೇಟ್ ಸಂತಾಪ ಸೂಚಿಸಿದೆ..