ಬೆಂಗಳೂರು:– FIR ದಾಖಲಾದ್ಮೇಲೆ ಯಾರೂ ಸಿಎಂ ಸ್ಥಾನದಲ್ಲಿ ಇರಲ್ಲ ಎಂದು CM ರಾಜೀನಾಮೆಗೆ ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ.
ಹಾಡ ಹಗಲೇ ಬ್ಯೂಟಿಷಿಯನ್ ಯುವತಿಗೆ ಪ್ಯಾಂಟ್ ಬಿಚ್ಚಿ ಖಾಸಗಿ ಅಂಗ ತೋರಿಸಿದ ಆಟೋ ಚಾಲಕ!
ಎಫ್ಐಆರ್ ದಾಖಲಾದ್ಮೇಲೆ ಯಾರೂ ಸಿಎಂ ಸ್ಥಾನದಲ್ಲಿ ಇರಲ್ಲ ಎಂದು ಹೇಳಿದ್ದಾರೆ. ಈ ಹಿಂದೆ ಆರೋಪ ಬಂದಾಗ ಬಿಎಸ್ ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ದಾರೆ. ರಾಮಕೃಷ್ಣ ಹೆಗಡೆ ಅವರು ಸಹ ರಾಜೀನಾಮೆ ನೀಡಿದ್ದರು. ಲೋಕಾಯುಕ್ತ ಪೊಲೀಸರು ಅಳೆದು ತೂಗಿ ಕೇಸ್ ತೆಗೆದುಕೊಂಡಿದ್ದಾರೆ. ಲೋಕಾಯುಕ್ತ ಪೊಲೀಸರ ತನಿಖೆಯಲ್ಲಿ ಕರ್ನಾಟಕ ಪೊಲೀಸರೇ ಇರುತ್ತಾರೆ ಎಂದಿದ್ದಾರೆ.ಸಿಎಂ ಕುಟುಂಬದ ಮೇಲೆ ಭ್ರಷ್ಟಾಚಾರ ಆರೋಪ ಬಂದಿದೆ. ನಮ್ಮ ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪ ಮಾಡಿದ್ದರು. ಇಂದು ಅವರ ಮೇಲೆ ಆರೋಪ ಬಂದಿದೆ. ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಯಾರೂ ಬಾಯಿ ಬಿಡುತ್ತಿಲ್ಲ. ರಾಹುಲ್ ಗಾಂಧಿ ಏನು ಭಾಷಣ ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಜೀನಾಮೆ ಕೊಡುತ್ತಿಲ್ಲ ಎಂಬ ಕಾಂಗ್ರೆಸ್ ಆರೋಪ ವಿಚಾರವಾಗಿ ಮಾತನಾಡಿದ ಅವರು, ನಾವು ಇಲ್ಲಿ ಸಚಿವರ ರಾಜೀನಾಮೆ ಕೇಳುತ್ತಿಲ್ಲ. ಸಿಎಂ ರಾಜೀನಾಮೆ ಕೇಳುತ್ತಿದ್ದೇವೆ. ಸಿಎಂ ಅಡಿಯಲ್ಲಿ ಇರುವ ಇಲಾಖೆಯ ಕೈಯಲ್ಲಿ ತನಿಖೆ ಮಾಡಲು ಆಗುತ್ತಾ? ಕುಮಾರಸ್ವಾಮಿ ಪ್ರಕರಣದಲ್ಲಿ ಅವರು ಇಲ್ಲಿ ಹೇಗೆ ಪ್ರಬಾವ ಬೀರಲು ಆಗುತ್ತದೆ. ರಾಜ್ಯ ಸರ್ಕಾರದ ಅಡಿಯಲ್ಲಿ ಇರುವ ಸಂಸ್ಥೆಯೇ ಕುಮಾರಸ್ವಾಮಿ ಕೇಸ್ ತನಿಖೆ ಮಾಡುತ್ತಿದೆ ಎಂದಿದ್ದಾರೆ.