ಬೆಂಗಳೂರು:- ಗಂಗೇನಹಳ್ಳಿ ಬಡಾವಣೆಯ ಜಮೀನು ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಇತ್ತೀಚಿಗೆ ಮಾಜಿ ಸಿಎಂ ಯಡಿಯೂರಪ್ಪ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು. ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೂ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಿದ್ದರು. ಇದೀಗ, ಅದರಂತೆ ವಿಚಾರಣೆಗೆ ಲೋಕಾ ಮುಂದೆ ಎಚ್ಡಿಕೆ ಹಾಜರಾಗಿದ್ದಾರೆ.
ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಇಂದು 1 ಗಂಟೆ ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ರು.
ಲೋಕಾಯುಕ್ತ ನೊಟೀಸ್ ಹಿನ್ನೆಲೆಯಲ್ಲಿ ದೆಹಲಿಯಿಂದ ಸಂಜೆ ಬೆಂಗಳೂರಿಗೆ ಬಂದಿಳಿದ ಕೇಂದ್ರ ಸಚಿವರು, ನೇರವಾಗಿ ಲೋಕಾಯುಕ್ತ ಕಚೇರಿಗೆ ತೆರಳಿ 1 ಗಂಟೆ ವಿಚಾರಣೆ ಎದುರಿಸಿದ್ರು.
ವಿಚಾರಣೆ ಬಳಿಕ ಮಾತನಾಡಿದ HDK, ನಾನು ಅಧಿಕಾರದಲ್ಲಿದ್ದಾಗ ಯಾವುದೇ ತಪ್ಪುಮಾಡಿಲ್ಲ. ಸ್ವಯಂಪ್ರೇರಣೆಯಿಂದಲೇ ವಿಚಾರಣೆಗೆ ಹಾಜರಾಗಿದ್ದೇನೆ. ಮತ್ತೆ ವಿಚಾರಣೆಗೆ ಕರೆದಿಲ್ಲ ಎಂದರು.