ಬೆಂಗಳೂರು: ಟಾಟಾ ಎಲೆಕ್ಟ್ರಾನಿಕ್ಸ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ ಘಟನೆ ಹೊಸೂರಿನ ಕೆಲಮಂಗಲ ಬಳಿಯ ಇರುವ ಸೆಲ್ ಫೋನ್ ತಯಾರಿಕಾ ಘಟಕದಲ್ಲಿ ನಡೆದಿದೆ. ಸೆಲ್ ಫೋನ್ ಬಿಡಿಭಾಗಗಳನ್ನು ತಯಾರಿಸುತ್ತಿದ್ದ ಸೆಲ್ ಫೋನ್ ಕಾರ್ಖಾನೆಯಾಗಿದ್ದು, ಒಂದೇ ಶಿಪ್ಟ್ ನಲ್ಲಿ ಸುಮಾರು 1500 ರಿಂದ 2000 ಜನರು 24 ಗಂಟೆ ಕೆಲಸ ಮಾಡುತ್ತಿದ್ದರು. ಅದೃಷ್ಟವಶಾತ್ ಯಾವುದೆ ಪ್ರಾಣಾಯಪಾಯ ಸಂಭವಿಸಿಲ್ಲ.
Condoms: ಸೆಕ್ಸ್ ಎಂಜಾಯ್ ಮಾಡಲು ಕಾಂಡೋಮ್ ಆಯ್ಕೆ ಹೇಗಿರಬೇಕು ಗೊತ್ತಾ..?
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಖಾನೆಯಿಂದ ಕಾರ್ಮಿಕರು ಆಚೆ ಓಡಿ ಬಂದಿದ್ದಾರೆ. ಕಂಪೆನಿಯಲ್ಲಿ ಮೊಬೈಲ್ ಬಿಡಿ ಭಾಗಗಳ ಉತ್ಪಾದನೆ ಮಾಡಲಾಗುತ್ತಿತ್ತು. ಮಿಕಲ್ ಘಟಕದಲ್ಲಿ ಬೆಳಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಭಾರಿ ಪ್ರಮಾಣದಲ್ಲಿ ಹೊಗೆ ತುಂಬಿಕೊಂಡಿದೆ. ಬೆಂಕಿ ಅವಘಡದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿವೆ. ಐದಕ್ಕೂ ಹೆಚ್ಚು ಅಗ್ನಿಶಾಮಕ ತಂಡದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ರಾಯಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.