ಬೆಂಗಳೂರು:- ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಆರು ತಿಂಗಳ ಹಿಂದೆಯೂ ಹೊಟೇಲ್ ಓಟೇರಾಗೆ ಹುಸಿ ಬಾಂಬ್ ಬೆದರಿಕೆ ಬಂದಿತ್ತು.
ವಿದ್ಯುತ್ ಬಿಲ್ ಪಾವತಿಸದಿದ್ದರೆ ಕರೆಂಟ್ ಕಟ್: ಅಕ್ಟೋಬರ್ 1ರಿಂದಲೇ ನಿಯಮ ಜಾರಿ!
ಇದೀಗ ಮತ್ತೆ ಬಾಂಬ್ ಇಟ್ಟು ಹೊಟೇಲ್ ಸ್ಪೋಟಿಸುವುದಾಗಿ ಈ ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಈ ಮೂಲಕ ಒಂದೇ ದಿನ ಎರಡು ನಗರದ ಎರಡು ಪ್ರತಿಷ್ಠಿತ ಹೋಟೆಲ್ಗೆ ಬಾಂಬ್ ಬೆದರಿಕೆ ಹಾಕಿದ್ದಾರೆ.
ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾಳ ದಳ ಮತ್ತು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭೇಟಿ ನೀಡಿದ್ದು, ಸಂಪೂರ್ಣ ಹೋಟೆಲ್ನ್ನು ತಪಾಸಣೆ ಮಾಡಲಾಗುತ್ತಿದೆ.
ಆದರೆ ಸದ್ಯ ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ. ಹುಸಿ ಬಾಂಬ್ ಬೆದರಿಕೆಯ ಮೇಲ್ ಎಂದು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಮಾಹಿತಿ ನೀಡಿದ್ದಾರೆ.