ರೀಲ್ಸ್ ಸ್ಟಾರ್ ಹಾಗೂ ಕಾಮಿಡಿ ಕಲಾವಿದ ಧನರಾಜ್ ಆಚಾರ್ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ.
RCB ಗೆ ಹಿಟ್ ಮ್ಯಾನ್ ಎಂಟ್ರಿ, ಫಾಫ್ ಔಟ್: ಈ ಸಲ ಕಪ್ ಗ್ಯಾರಂಟಿ ಅಂತಿದ್ದಾರೆ ಫ್ಯಾನ್ಸ್!
ಇನ್ನೂ ಧನರಾಜ್ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಿದ್ದಂತೆ ಕಿಚ್ಚ ಗರಂ ಆಗಿದ್ದಾರೆ. ಕಿಚ್ಚ ಕೊಂಚ ಮುನಿಸಿಕೊಳ್ಳಲು ಕಾರಣವೂ ಇದೆ.
ಹಿಂದೆ ಬಿಗ್ ಬಾಸ್’ ಬಗ್ಗೆ ಧನರಾಜ್ ಅವರು ಒಂದು ವಿಡಿಯೋ ಮಾಡಿದ್ದರು. ಜಗಳ ನಡೆಯೋದು ಟಿಆರ್ಪಿಗಾಗಿ ಎಂದು ಅವರು ಹೇಳಿದ್ದರು. ಈ ವಿಡಿಯೋನ ಪ್ಲೇ ಮಾಡಲಾಯಿತು. ಆ ಬಳಿಕ ಸುದೀಪ್ ಗಂಭೀರವಾಗಿ ಕ್ಲಾಸ್ ತೆಗೆದುಕೊಂಡರು. ‘ನಾವು ಹೆಂಗ್ ಕಾಣಿಸ್ತೀವಿ? ನಾನು ತಮಾಷೆ ಮಾಡೋ ಹಾಗೆ ಕಾಣ್ತಾ ಇದೀನಾ? ಜಗಳ ಮಾಡೋದು ಟಿಆರ್ಪಿಗಾ? ನಾನು ನೋಡದನ್ನು ಬದಲಾಯಿಸಿಕೊಳ್ಳೋಕೆ ಆಗಲ್ಲ. ಗೌರವ ಇಲ್ಲದ ವ್ಯಕ್ತಿನ ಏಕೆ ಕಳುಹಿಸುತ್ತಿದ್ದೀರಿ’ ಎಂದು ಸುದೀಪ್ ಪ್ರಶ್ನೆ ಮಾಡಿದರು.
ನಾನು ಮಾಡಿರೋದು ತಮಾಷೆಗೆ. ಇದನ್ನು ಗಂಭೀರವಾಗಿ ಸ್ವೀಕರಿಸಬೇಡಿ’ ಎಂದು ಧನರಾಜ್ ಕೇಳಿಕೊಂಡರು. ಆ ಬಳಿಕ ಸುದೀಪ್ ನಕ್ಕರು. ಆಗ ಧನರಾಜ್ ನಿಟ್ಟುಸಿರು ಬಿಟ್ಟರು. ಧನರಾಜ್ಗೆ ಮಗು ಜನಿಸಿ ಇನ್ನೂ ಒಂದು ತಿಂಗಳೂ ಆಗಿಲ್ಲ. ಮಗು ಜನಿಸಿದ ಬಳಿಕ ಅವರಿಗೆ ಬಿಗ್ ಬಾಸ್ನಿಂದ ಆಫರ್ ಬಂದಿತ್ತು. ಹೀಗಾಗಿ, ಇದನ್ನು ಅವರು ಒಪ್ಪಿಕೊಂಡರು.