ಮೈಸೂರು:-ಕುಮಾರಸ್ವಾಮಿಯನ್ನ ADGP ಹಂದಿ ಎಂದು ಕರೆದಿಲ್ಲ, ಇಂಗ್ಲೀಷ್ ಪದ ಬಳಸಿದ್ದಾರಷ್ಟೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ….
ಕುಮಾರಸ್ವಾಮಿಯನ್ನು ಎಡಿಜಿಪಿ ಹಂದಿ ಎಂದು ಕರೆದಿದ್ದಾರಾ? ಇಲ್ಲಾ ತಾನೇ. ಅವರು ಇಂಗ್ಲೀಷ್ನ ಬರ್ನಾಡ್ ಶಾರ ವ್ಯಾಕ್ಯವನ್ನ ಉಲ್ಲೇಖಿಸಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.
ಬಳಿಕ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಮತ್ತು ಕುಮಾರಸ್ವಾಮಿ ನಡುವೆ ಜಟಾಪಟಿ ವಿಚಾರ ಉತ್ತರಿಸಿದರು. ಕುಮಾರಸ್ವಾಮಿಯನ್ನು ಎಡಿಜಿಪಿ ಹಂದಿ ಎಂದು ಕರೆದಿದ್ದಾರಾ? ಇಲ್ಲಾ ತಾನೇ. ಅವರು ಇಂಗ್ಲೀಷ್ನ ಬರ್ನಾಡ್ ಶಾರ ವ್ಯಾಕ್ಯವನ್ನ ಉಲ್ಲೇಖಿಸಿದ್ದಾರೆ ಅಷ್ಟೇ. ಕುಮಾರಸ್ವಾಮಿ ಎಡಿಜಿಪಿ ಮೇಲೆ ಕೆಲವೊಂದಿಷ್ಟು ಆರೋಪ ಮಾಡಿದ್ದರು. ಅದಕ್ಕೆ ಕೆಲವು ಉತ್ತರಗಳನ್ನ ಕೊಟ್ಟಿದ್ದಾರೆ. ಹಂದಿ ಎನ್ನುವ ಪದವನ್ನು ಕುಮಾರಸ್ವಾಮಿ ಅವರಿಗೆ ಬಳಸಿದ್ದಾರೆ ಎಂದು ಹೇಗೆ ಹೇಳುತ್ತೀರಾ? ಎಂದು ಪ್ರಶ್ನಿಸಿದ್ದಾರೆ.
ನಾನು ಈ ವಿಚಾರದ ಬಗ್ಗೆ ಸುದೀರ್ಘ ವಿವರಣೆ ನೀಡುವುದಿಲ್ಲ. ಅದರಲ್ಲೂ ಕುಮಾರಸ್ವಾಮಿ (HD Kumaraswamy) ಹೇಳಿಕೆಗೆ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಹೇಳಿದ್ದೇನೆ. ಕುಮಾರಸ್ವಾಮಿ ತಪ್ಪು ಮಾಡಿ ಬಿಟ್ಟಿದ್ದಾರೆ. ಹೀಗಾಗಿ ಬೇರೆಯವರ ಮೇಲೆ ಸುಳ್ಳು ಆರೋಪಗಳನ್ನ ಮಾಡುತ್ತಿದ್ದಾರೆ ಅಷ್ಟೇ ಎಂದು ತಿರುಗೇಟು ನೀಡಿದ್ದಾರೆ