ಹೈದರಾಬಾದ್: 7ನೇ ತರಗತಿ ವಿದ್ಯಾರ್ಥಿನಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಘಟನೆ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಬಗ್ಗೆ ತಿಳಿದ ಸಂತ್ರಸ್ತೆ ಕುಟುಂಬಸ್ಥರು ಆರೋಪಿಯ ಮನೆ ಮತ್ತು ಕಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಪೊಲೀಸರ ಉಪಸ್ಥಿತಿಯಲ್ಲೂ ಕುಟುಂಬಸ್ಥರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಲ್ಲದೇ ಆರೋಪಿಯ ಆಸ್ತಿಯನ್ನು ಸುಟ್ಟುಹಾಕಿದ್ದಾರೆ. ಪೊಲೀಸರು ಅಂತಿಮವಾಗಿ ಗುಂಪನ್ನು ಚದುರಿಸಿ ಸುವ್ಯವಸ್ಥೆಯನ್ನು ಪುನಃಸ್ಥಾಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
Health Tips: ಕೆಂಪು ಸೇಬಿಗಿಂತ ಹಸಿರು ಸೇಬು ಹೆಚ್ಚು ಆರೋಗ್ಯಕರವಂತೆ! ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ..?
ಸಿದ್ದಿಪೇಟೆ ಪೊಲೀಸ್ ಕಮಿಷನರ್ ಕೂಡ ಸ್ಥಳಕ್ಕೆ ಧಾವಿಸಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ ಉದ್ವಿಗ್ನತೆಯನ್ನು ಶಮನಗೊಳಿಸಿ ಶಾಂತಿ ಕಾಪಾಡಿದರು. ಇದೇ ವೇಳೆ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸಂತ್ರಸ್ತೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆಗಳು ನಡೆಯುತ್ತಿವೆ.