ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿದ ಆರೋಪ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಅ.22 ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ.
Cook With Coconut Oil: ತಲೆಗೆ ಮಾತ್ರವಲ್ಲ, ಅಡುಗೆಗೆ ತೆಂಗಿನೆಣ್ಣೆ ಬಳಸುವುದು ಆರೋಗ್ಯಕ್ಕೆ ಒಳ್ಳೆಯದು
ಜನಾಧಿಕಾರ ಸಂಘರ್ಷ ಪರಷತ್ನ ಆದರ್ಶ ಆರ್. ಐಯ್ಯರ್ ನೀಡಿದ ದೂರಿನ ಮೇರೆಗೆ ಶುಕ್ರವಾರ ಜನಪ್ರತಿನಿಧಿಗಳ ನ್ಯಾಯಾಲಯ ಎಫ್ಐಆರ್ ದಾಖಲಿಸುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ಅ.10ಕ್ಕೆ ಮುಂದೂಡಿಕೆ ಮಾಡಿತ್ತು. ಸಚಿವೆ ನಿರ್ಮಲಾ ಸೀತಾರಾಮನ್ ಜತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಮುಖಂಡ ನಳಿನ್ ಕುಮಾರ್ ಕಟೀಲ್,
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಕಚೇರಿ ಮತ್ತು ಇ.ಡಿ. ಇಲಾಖೆ ವಿರುದ್ಧ ದೂರು ದಾಖಲಿಸಲಾಗಿತ್ತು. 2019ರ ಏಪ್ರಿಲ್ ತಿಂಗಳಿನಿಂದ 2022ರ ಆಗಸ್ಟ್ ತಿಂಗಳವರೆಗೆ ಉದ್ಯಮಿ ಅನಿಲ್ ಅಗಲ್ವಾಲ್ ಅವರ ಸಂಸ್ಥೆಯ ಕಡೆಯಿಂದ ಸುಮಾರು 230 ಕೋಟಿ ರು. ಮತ್ತು ಅರೊಬಿಂದೋ ಫಾರ್ಮಸಿ ಸಂಸ್ಥೆಯಿಂದ 49 ಕೋಟಿ ರು.ನಷ್ಟು ಚುನಾವಣಾ ಬಾಂಡ್ಗಳ ಮೂಲಕ ವಸೂಲಿ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖವಿದೆ.