ಬೆಂಗಳೂರು:- ಹಿರಿಯ ನಾಗರಿಕರ ಮಾಸಾಶನ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ ನಡೆಸಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
Hubballi: ಸಾರಿಗೆ ನೌಕರರಿಂದ ಬಸ್ ನಿಲ್ದಾಣದಲ್ಲಿ ಸ್ವಯಂಪ್ರೇರಿತ ಸ್ವಚ್ಚತಾ ಅಭಿಯಾನ!
ಈ ಸಂಬಂಧ ಮಾತನಾಡಿದ ಅವರು,ಹಿರಿಯ ನಾಗರಿಕರಿಗೆ ಗೌರವ ಮತ್ತು ಉತ್ತಮ ಆರೋಗ್ಯ ಸೇವೆ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯ ಸರ್ಕಾರ ಹಿರಿಯ ನಾಗರಿಕರ ಸಬಲೀಕರಣಕ್ಕಾಗಿ, ಅವರ ಅಭ್ಯುದಯಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಹಿರಿಯ ನಾಗರಿಕರ ಮಾಸಾಶನ ಹೆಚ್ಚಳ ಮಾಡುವ ಬಗ್ಗೆ ಬೇಡಿಕೆ ಇದೆ. ಈ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ನಮ್ಮ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ. ಗ್ಯಾರಂಟಿ ಯೋಜನೆಗಳಿಂದ ಹಿರಿಯ ನಾಗರಿಕರಿಗೆ ಬಹಳಷ್ಟು ಅನುಕೂಲವಾಗುತ್ತಿದೆ. ಶಕ್ತಿ ಯೋಜನೆಯಡಿ ನಮ್ಮ ಹಿರಿಯ ತಾಯಿಂದಿರರು ಕೂಡ ಉಚಿತವಾಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾರೆ. ಇದು ಸಂತಸದ ಸಂಗತಿ ಆಗಿದೆ ಎಂದರು.