ಹುಬ್ಬಳ್ಳಿ: ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಹಿಂದಿನ ಪಿಡಿಒ ಅವಧಿಯಲ್ಲಿ ಅವ್ಯವಹಾರ, ಭ್ರಷ್ಟಾಚಾರ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕೈಗೊಳ್ಳಲಾಗಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಂಗಳವಾರ 11ನೇ ದಿನಕ್ಕೆ ಕಾಲಿಟ್ಟಿದೆ ಎಂದು ಕಲಘಟಗಿ ತಾಪಂ ಮಾಜಿ ಉಪಾಧ್ಯಕ್ಷ ಚಂದ್ರಗೌಡ ಪಾಟೀಲ ತಿಳಿಸಿದರು.
ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕೆಂದು ಕಾನೂನು ಹೇಳಿಲ್ಲ: ಮಧು ಬಂಗಾರಪ್ಪ!
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷದಿಂದ ಯಾವುದೇ ಗ್ರಾಮ ಸಭೆ, ವಾರ್ಡ್ ಸಭೆಗಳನ್ನು ಮಾಡಿಲ್ಲ. ಈ ಅವಧಿಯಲ್ಲಿ ಕೋಟ್ಯಂತರ ರೂಪಾಯಿ ತೊಟ್ಟಿ ಕ್ರಿಯಾ ಯೋಜನೆ ರೂಪಿಸಿ ಖರ್ಚು ಹಾಕಲಾಗಿದೆ.
ಈ ಕುರಿತು ಸಮಗ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು. ದಾಸ್ತಿಕೊಪ್ಪದಲ್ಲಿ ಗ್ರಾಮಸ್ಥರು ಧರಣಿ ನಡೆಸುತ್ತಿದ್ದು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಬೇಕು.
ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಬೇಕು ಎಂದು ಗ್ರಾಮದ ಶಿವಪುತ್ರಪ್ಪ ಹುಗ್ಗಿ, ಶೇಖರಗೌಡ ಜಂಗಳಪ್ಪಗೌಡ್ರ, ಶಿವಪುತ್ರಪ್ಪ ಬಡಿಗೇರ, ಮಂಜುನಾಥ ಸವಣೂರ, ಗುರುಲಿಂಗಯ್ಯ ಹಿರೇಮಠ ಇತರರು ಮನವಿ ಮಾಡಿದರು.