ದಾವಣಗೆರೆ:- ರೈಲ್ವೇ ಪರೀಕ್ಷೆ ಇನ್ಮುಂದೆ ಕನ್ನಡದಲ್ಲಿ ನಡೆಸಲಾಗುತ್ತದೆ ಎಂದು ಸಚಿವ ವಿ ಸೋಮಣ್ಣ ಘೋಷಣೆ ಮಾಡಿದ್ದಾರೆ.
ಕೊತ್ತಂಬರಿ ಸೊಪ್ಪಿನ ಪ್ರಯೋಜನ ಅಷ್ಟಿಷ್ಟಲ್ಲ: ಈ ಸುದ್ದಿ ನೀವು ಓದಲೇಬೇಕು!
ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು, 15 ಲಕ್ಷ ಜನರು ಪಿಂಚಣಿ ಪಡೆಯುತ್ತಿದ್ದಾರೆ. ಖಾಲಿ ಇರುವ 16,000 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು, ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು. ಕನ್ನಡದಲ್ಲೇ ಪರೀಕ್ಷೆ ಬರೆಯಲು ಮತ್ತು ಓದಲು ಪುಸ್ತಕಗಳು ಸಿಗುತ್ತವೆ, ಉಪಯೋಗಿಸಿಕೊಳ್ಳಿ. ಇಲ್ಲ ಇಂಗ್ಲಿಷ್ನಲ್ಲಿ ಇರುವುದನ್ನು ತರ್ಜುಮೆ ಮಾಡಲಾಗುತ್ತದೆ. ಅದನ್ನು ಓದಿ ಅನುಕೂಲವಾಗುತ್ತದೆ. ಮುಂದಿನ ದಿನಗಳಲ್ಲಿ ಖಾಲಿ ಇರುವ 46,000 ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದರು.
ಅಲ್ಲದೇ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು, ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ. ನೇರ ರೈಲು ಮಾರ್ಗವು ನಿಧಾನಗತಿಯಲ್ಲಿ ಸಾಗುತ್ತಿದ್ದು, ಕಳೆದ ಎರಡೂವರೆಗೆ ತಿಂಗಳಿಂದ ಇದರ ಪ್ರಗತಿ ವೇಗ ಹೆಚ್ಚಿಸಲಾಗಿದೆ.
ಒಟ್ಟು ಈ ಯೋಜನೆಗೆ 2406.73 ಎಕರೆ ಭೂಮಿ ಬೇಕಾಗಿದ್ದು, ಈಗಾಗಲೇ 2119.16 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. 287.54 ಎಕರೆ ಸ್ವಾಧೀನ ಮಾಡಿಕೊಳ್ಳಬೇಕಾಗಿದೆ ಎಂದರು.