ನವದೆಹಲಿ:- ನಟಿ ಸಮಂತಾ ಹಾಗೂ ನಟ ನಾಗಚೈತನ್ಯ ಅವರ ವಿಚ್ಛೇದನಕ್ಕೆ ಬಿಆರ್ಎಸ್ ನಾಯಕ ಕೆಟಿಆರ್ ಕಾರಣ ಎಂದು ತೆಲಂಗಾಣ ಸಚಿವೆ ಕೊಂಡಾ ಸುರೇಖಾ ಅವರು ಹೇಳಿಕೆ ನೀಡಿದ್ದು, ಭಾರಿ ವಿವಾದ ಸೃಷ್ಟಿಸಿದೆ.
ಇದಕ್ಕೆ ನಟ ನಾಗಾರ್ಜುನ, ನಟಿ ಸಮಂತಾ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಸಚಿವೆ ಕೊಂಡಾ ಸುರೇಖಾ ಹೇಳಿಕೆಯನ್ನು ಖಂಡಿಸ್ತಿದ್ದೇನೆ. ರಾಜಕಾರಣದಿಂದ ದೂರ ಇರುವ ಸಿನಿ ಪ್ರಮುಖರನ್ನು ದಯಮಾಡಿ, ನಿಮ್ಮ ಎದುರಾಳಿಗಳನ್ನು ಟೀಕೆ ಮಾಡಲು ಬಳಸಿಕೊಳ್ಳಬೇಡಿ. ದಯಮಾಡಿ ಇತರರ ವೈಯಕ್ತಿಕ ವಿಷಯಗಳನ್ನು ಗೌರವಿಸಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ನೀವು ಮಾಡಿರುವ ಆರೋಪಗಳು ಸಂಪೂರ್ಣ ಅಸಂಬದ್ಧ. ಸುಳ್ಳಿನಿಂದ ಕೂಡಿವೆ. ನಿಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ನಾಗಾರ್ಜುನ ಆಗ್ರಹಿಸಿದ್ದಾರೆ.
ಕೊಂಡಾ ಸುರೇಖಾ ಅವರ ಹೇಳಿಕೆಗೆ ನಟಿ ಸಮಂತಾ ರುತ್ ಪ್ರಭು ಕೂಡ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಮತ್ತೊಬ್ಬರ ವೈಯಕ್ತಿಕ ವಿಚಾರಗಳನ್ನು ಗೌರವಿಸಿ, ರಾಜಕೀಯ ಜಗಳಗಳಿಂದ ನನ್ನ ಹೆಸರನ್ನು ದೂರವಿಡಿ ಎಂದು ಹೇಳಿದ್ದಾರೆ.