ಬಿಹಾರ:- ಆರ್ಜೆಡಿ ಮುಖಂಡನ ಮೇಲೆ ಗುಂಡಿನ ದಾಳಿ ನಡೆದು ಸ್ಥಿತಿ ಗಂಭೀರವಾಗಿದೆ. ಬಿಹಾರದಲ್ಲಿ ರಾಷ್ಟ್ರೀಯ ಜನತಾ ಪಕ್ಷದ ಮುಖಂಡ ಪಂಕಜ್ ಯಾದವ್ ಮೇಲೆ ಕ್ರಿಮಿನಲ್ಗಳು ಗುಂಡಿನ ದಾಳಿ ನಡೆಸಿದ್ದಾರೆ.
ಅಕ್ರಮವಾಗಿ ಚೀನಾಗೆ ಚಿಪ್ಪು ಹಂದಿ ಸಾಗಾಟ: ಆರೋಪಿಗಳ ಎಡೆಮುರಿ ಕಟ್ಟಿದ ಪೊಲೀಸ್!
ಆರೋಪಿಗಳು ಪಂಕಜ್ ಅವರ ಎದೆ ಮೇಲೆ ಹಲವು ಸುತ್ತಿನ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಆರ್ಜೆಡಿ ಮುಖಂಡ ಬೆಳಗಿನ ವಾಕಿಂಗ್ಗೆ ತೆರಳಿದ್ದ ವೇಳೆ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಖಾಸಗಿ ನರ್ಸಿಂಗ್ ಹೋಂಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಆರ್ಜೆಡಿ ನಾಯಕನ ಮೇಲೆ ಗುಂಡು ಹಾರಿಸಿದವರು ಯಾರು ಮತ್ತು ಏಕೆ ಎಂಬುದು ಇನ್ನೂ ಬಹಿರಂಗವಾಗಿಲ್ಲ
ಪ್ರಾಣ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಗುಂಡು ತಗುಲಿದೆ. ಘಟನೆ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮಾಹಿತಿ ತಿಳಿದ ತಕ್ಷಣ ಸಫಿಯಾ ಸರಾಯ್, ಖಾಸಿಂ ಬಜಾರ್ ಮತ್ತು ಕೊತ್ವಾಲಿ ಪೊಲೀಸರು ಆಗಮಿಸಿದರು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.