ಬೆಂಗಳೂರು:- 50 ಕೋಟಿ ರೂಗೆ ಡಿಮ್ಯಾಂಡ್ ಮಾಡಿದ್ದಾರೆ ಎಂದು ಹೆಚ್ಡಿಕೆ ವಿರುದ್ಧ ದೂರು ನೀಡಿದ್ದ ಉದ್ಯಮಿ ವಿರುದ್ಧವೇ ಪ್ರತಿದೂರು ದಾಖಲಾಗಿದೆ.
ವಿದ್ಯುತ್ ಅವಘಡ: ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು!
ಜೀವಬೆದರಿಕೆ ಹಾಕಿದ್ದಾರೆಂದು ಆರೋಪಿಸಿರುವ ಉದ್ಯಮಿ ವಿಜಯ್ ಟಾಟಾ ವಿರುದ್ಧ ಇದೀಗ ವಿಧಾನಪರಿಷತ್ ಜೆಡಿಎಸ್ ಮಾಜಿ ಸದಸ್ಯ ರಮೇಶ್ಗೌಡ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ರಮೇಶ್ ಗೌಡರ ದೂರನ್ನು ಪೊಲೀಸರು ಸ್ವೀಕರಿಸಿದ್ದಾರೆ.
ನೂರು ಕೋಟಿ ರೂ. ಹಣ ಕೇಳಿದ್ದ, ಇಲ್ಲ ಅಂದಿದ್ದಕ್ಕೆ, ಆ.24ರಂದು ಮನೆಗೆ ಊಟಕ್ಕೆ ಕರೆದಾಗ ಬೆದರಿಕೆ ಹಾಕಿದ್ದಾರೆ. ನಾನು ಈಗಾಗಲೇ ಲಾಸ್ನಲ್ಲಿದ್ದೇನೆ, ನನಗೆ ಹಣ ಬೇಕು. ನೀವು ನೂರು ಕೋಟಿ ರೂ. ಕೊಡಿ, ಇಲ್ಲವಾದರೆ ನಿಮ್ಮನ್ನ ಮತ್ತು ಹೆಚ್ಡಿ ಕುಮಾರಸ್ವಾಮಿಯನ್ನ ಬಿಡಲ್ಲ ಎಂದು ಬೆದರಿಕೆ ಹಾಕಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇನ್ನು ದೂರು ನೀಡಿರುವ ವಿಜಯ್ ಟಾಟಾ, ಹೊರಗಿನವರಲ್ಲ. 2018 ರಿಂದ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಇದೀಗ ಹೆಚ್ಡಿ ಕುಮಾರಸ್ವಾಮಿ ಮತ್ತು ಮಾಜಿ ಎಂಎಲ್ಸಿ ರಮೇಶ್ ಗೌಡ ವಿರುದ್ಧ ದೂರು ನೀಡಿದ್ದಾರೆ. ದೂರಿನ ಅನ್ವಯ ಇಬ್ಬರ ವಿರುದ್ಧವೂ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.