ಬೆಂಗಳೂರು: ಸಿಲಿಕಾನ್ ಸಿಟಿ ಜನರಿಗೆ ಮತ್ತೊಂದು ದರ ಏರಿಕೆ ಶಾಕ್ ಕಾದಿದ್ದು ಮೆಟ್ರೋ ಪ್ರಯಾಣಿಕರಿಗೆ ಶಾಕ್ ನೀಡಲು ಮುಂದಾದ ಬಿಎಂಆರ್ಸಿಎಲ್ . ಮೆಟ್ರೋ ಟಿಕೆಟ್ ದರ ಏರಿಕೆ ಫಿಕ್ಸ್ ಮಾಡಲಾಗಿದ್ದು ಎರಡನೇ ಬಾರಿ ಮೆಟ್ರೋ ಟಿಕೆಟ್ ದರ ಏರಿಸಲು ಮುಂದಾದ ನಿಗಮ
ಈಗಾಗಲೇ ಹಲವು ಬಾರಿ ಮೆಟ್ರೋ ದರ ಏರಿಕೆ ಬಗ್ಗೆ ಪ್ರಸ್ತಾಪ ಮಾಡಿದ್ದ ಬಿಎಂಆರ್ಸಿಎಲ್ ಕಳೆದ ಹಲವು ವರ್ಷಗಳಿಂದ ದರ ಏರಿಕೆ ಮಾಡದ ಬಿಎಂಆರ್ಸಿಎಲ್ ಸದ್ಯ 15 ರಿಂದ 20% ಟಿಕೆಟ್ ದರ ಏರಿಕೆ ಸಾಧ್ಯತೆ
ಬೆಂಗಳೂರು- ತುಮಕೂರು ರಸ್ತೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಮ್ಮ ಮೆಟ್ರೋ ಸೇವೆ ಶೀಘ್ರದಲ್ಲೇ ಆರಂಭ
ಈ ಹಿನ್ನೆಲೆ ಟಿಕೆಟ್ ದರ ಏರಿಕೆಗೆ ಈಗಾಗಲೇ ಕಮಿಟಿ ರಚಿಸಿರುವ ನಮ್ಮ ಮೆಟ್ರೋ ‘ದಿ ಫೇರ್ ಪಿಕ್ಸೇಷನ್ ಕಮಿಟಿ’ (ಎಫ್ಎಫ್ಸಿ) ರಚನೆ ಇದೊಂದು ಸ್ವತಂತ್ರ ಕಮಿಟಿಯಾಗಿದ್ದು, ಪ್ರಯಾಣಿಕರ ಸಲಹೆ ಪಡೆದು ಟಿಕೆಟ್ ದರ ಏರಿಕೆಗೆ ಮುಂದಾದ ಕಮಿಟಿ
ಅ.21 ರೊಳಗೆ ಪ್ರಯಾಣಿಕರು ತಮ್ಮ ಅಭಿಪ್ರಾಯ ತಿಳಿಸಲು ಕಾಲಾವಕಾಶ ನೀಡಿದ ಬಿಎಂಆರ್ಸಿಎಲ್ ಪ್ರಯಾಣಿಕರ ಸಲಹೆಯನ್ನ [email protected] ಗೆ ಕಳಿಸುವಂತೆ ತಿಳಿಸಿರುವ ಬಿಎಂಆರ್ಸಿಎಲ್
ಪ್ರಸ್ತುತ, ನಮ್ಮ ಮೆಟ್ರೋ ಟಿಕೆಟ್ ಕನಿಷ್ಠ ದರವು 10 ರೂ. ಮತ್ತು ಗರಿಷ್ಠ 60 ರೂ. ಇದೆ. ಗರಿಷ್ಠ ದರವು ನೇರಳೆ ಮತ್ತು ಹಸಿರು ಮಾರ್ಗಗಳೆರಡರಲ್ಲೂ ದೀರ್ಘ ಪ್ರಯಾಣಕ್ಕೆ ಅನ್ವಯಿಸುತ್ತದೆ. ವೈಟ್ಫೀಲ್ಡ್-ಚಲ್ಲಘಟ್ಟ ನಡುವಣ ದೂರ 43.49 ಕಿಮೀ ಮತ್ತು ಸಿಲ್ಕ್ ಇನ್ಸ್ಟಿಟ್ಯೂಟ್-ನಾಗಸಂದ್ರ ನಡುವಣ ದೂರ 30.32 ಕಿಮೀ ಇದ್ದರೂ ಅವುಗಳ ದರ ಒಂದೇ (60 ರೂ) ಆಗಿದೆ.
ಸ್ಮಾರ್ಟ್ಕಾರ್ಡ್ಗಳು ಮತ್ತು ಕ್ಯೂಆರ್ ಕೋಡ್ ಟಿಕೆಟ್ಗಳನ್ನು ಬಳಸುವ ಪ್ರಯಾಣಿಕರಿಗೆ ಶೇಕಡಾ 5 ರಷ್ಟು ರಿಯಾಯಿತಿ ಸಿಗುತ್ತದೆ.