ಬೆಂಗಳೂರು: ರಾಜ್ಯಾದ್ಯಂತ ಎಲ್ಲಡೆ ನವರಾತ್ರಿ ಹಬ್ಬದ ಸಡಗರ ಮನೆ ಮಾಡಿದೆ. ಆದರೆ, ಬಾಕಿ ಇರುವ ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಜಮೆಯಾಗಿಲ್ಲ ಎಂದು ಸರ್ಕಾರದ ವಿರುದ್ಧ ಮಹಿಳೆಯರು ಮುನಿಸಿಕೊಂಡಿದ್ದಾರೆ. ಆದರೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ನ್ಯೂಸ್ ನೀಡುವ ಮೂಲಕ ಮುನಿಸನ್ನು ತಣ್ಣಗಾಗಿಸಿದ್ದಾರೆ.
ತಾಂತ್ರಿಕ ಕಾರಣದಿಂದ ಎರಡು ತಿಂಗಳ ಕಂತಿನ ಹಣ ತಡವಾಗಿತ್ತು. ಈ ತಿಂಗಳು ಜುಲೈ ಮತ್ತು ಆಗಸ್ಟ್ ಕಂತಿನ ಹಣ ಜಮೆಯಾಗಲಿದೆ ಎಂದು ಹೇಳಿದರು.ಈ ಲಕ್ಷ್ಮೀ ಹೆಬ್ಬಾಳಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ ಎಂದು ಮೊನ್ನೆ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ನನ್ನ ಬಗ್ಗೆ ಹೇಳಿದ್ದಾರೆ.
ಮೂಡಲಗಿ ತಾಲೂಕಿನ ಕಲ್ಲೋಳ್ಳಿಯಲ್ಲಿ ಮಾತನಾಡಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಇದೇ ಅ.7 ಮತ್ತು 9 ರಂದು ಎರಡೂ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯಾಗಲಿದೆ ಎಂದು ತಿಳಿಸಿದರು.
ಜುಲೈ ಮತ್ತು ಆಗಸ್ಟ್ ತಿಂಗಳ ಹಣ ಎರಡು ಹಂತದಲ್ಲಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ದಸರಾ ಒಳಗಡೆಯೇ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ. ಜುಲೈ ತಿಂಗಳ ಹಣ ಸೋಮವಾರ (ಅ.7) ಮತ್ತು ಆಗಸ್ಟ್ ತಿಂಗಳ ಹಣ ಬುಧವಾರ (ಅ.09) ರಂದು ಗೃಹಲಕ್ಷ್ಮೀಯರ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. 1 ಕೋಟಿಗೂ ಅಧಿಕ ಮಹಿಳೆಯರ ಖಾತೆಗೆ ಒಟ್ಟು ನಾಲ್ಕು ಸಾವಿರ ರೂ. ಬರಲಿದೆ.