ಕೊಪ್ಪಳ:- ಒಳ ಮೀಸಲಾತಿ ಜಾರಿಗೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಹೂಕೋಸು ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!? ನೀವು ತಿಳಿಯಲೇಬೇಕು!
ಶಾಸಕ ರಾಯರೆಡ್ಡಿ ಜಾತಿಗಣತಿ ವರದಿ ಜಾರಿಗೆ ಒತ್ತಾಯಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಸವರಾಜ ರಾಯರೆಡ್ಡಿ ಅವರು ನನ್ನನ್ನು ಭೇಟಿ ಮಾಡಿದ್ದು ನಿಜ. ಈ ಬಗ್ಗೆ ಹಿಂದುಳಿದ ವರ್ಗಗಳ ಇಲಾಖೆ ಸಚಿವರ ಜೊತೆಗೆ ಚರ್ಚೆ ಮಾಡುತ್ತೇನೆ. ಮುಂದಿನ ವಾರವೇ ವರದಿ ಜಾರಿ ಬಿಡುಗಡೆ ಮಾಡಬೇಕು ಎಂದು ರಾಯರೆಡ್ಡಿ ಹೇಳಿರಬಹುದು. ಆದರೆ, ವಾರದಲ್ಲಿ ಮಾಡಲು ಆಗುವುದಿಲ್ಲ. ವರದಿಯನ್ನು ಸಂಪುಟ ಸಭೆಯ ಮುಂದಿಟ್ಟು, ಒಪ್ಪಿಗೆ ಪಡೆಯಬೇಕು. ನಂತರ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಿ, ವರದಿ ಜಾರಿ ಮಾಡಬೇಕಾಗುತ್ತದೆ. ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.
ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದು ಸರಿ ಇರಬಹುದು. ಅವರು ಪಕ್ಷದ ಹಿರಿಯ ಶಾಸಕರು. ಅವರು ಹೇಳಿದರೆ ಜೆಡಿಎಸ್ ಹೇಳಿದಂತೆ. ಅವರದ್ದೇ ಪಕ್ಷದ ಶಾಸಕರ ಬಗ್ಗೆ ಕುಮಾರಸ್ವಾಮಿ ಮಾತನಾಡಿದ್ದಾರೆ ಎಂಬುದಾದರೆ ಅದನ್ನು ನೀವೇ ಅರ್ಥ ಮಾಡಿಕೊಳ್ಳಬೇಕು. ನಾನು ಅಧಿಕಾರದಲ್ಲಿ ಇದ್ದರೆ ಬಿಜೆಪಿ- ಜೆಡಿಎಸ್ ಪಕ್ಷ ದುರ್ಬಲ ಆಗುತ್ತವೆ ಎಂಬ ಭಯ. ಅದಕ್ಕೆ ಕೇಂದ್ರ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ನನ್ನ ಬಗ್ಗೆ ಮಾತನಾಡುತ್ತಾರೆ ಎಂದು ಟೀಕಿಸಿದರು.
ಸಚಿವ ಸತೀಶ ಜಾರಕಿಹೊಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭೇಟಿ ಬಗ್ಗೆ ಪ್ರತಿಕ್ರಿಯಿಸಿ, ಅವರಿಬ್ಬರು ಸಚಿವರು. ನಮ್ಮ ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿದರೆ ತಪ್ಪೇನು? ಎಂದು ಪ್ರಶ್ನಿಸಿ ಊಹೆ ಮಾಡಿಕೊಂಡು ವರದಿ ಮಾಡಬೇಡಿ ಎಂದು ಮಾಧ್ಯಮಗಳ ವಿರುದ್ಧ ಸಿಡಿಮಿಡಿಗೊಂಡರು.