ಬೆಂಗಳೂರು:-ಬೀದಿಗಿಳಿದು ಕಿತ್ತಾಡುವುದು ಸರಿಯಲ್ಲ ಎಂದು ಹೇಳುವ ಮೂಲಕ ರಾಜ್ಯದ ರಾಜಕೀಯ ಬೆಳವಣಿಗೆ ಬಗ್ಗೆ ಡಿಕೆ ಸುರೇಶ್ ಅಸಮಾಧಾನ ಹೊರ ಹಾಕಿದ್ದಾರೆ..
ಎಐಸಿಸಿ ಅಧ್ಯಕ್ಷರ ವಿರುದ್ಧ ಅಪಮಾನಕರ ಭಾಷಣ: ಚಕ್ರವರ್ತಿ ಸೂಲಿಬೆಲೆಗೆ ಜಾಮೀನು!
ಇತ್ತೀಚಿನ ಬೆಳವಣಿಗೆಗಳು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ರಾಜ್ಯದಲ್ಲಿ ಕಾಂಗ್ರೆಸ್, ದೇಶದಲ್ಲಿ ಎನ್ಡಿಎ ಅವಕಾಶ ಕೊಟ್ಟಿರೋದು ಅಭಿವೃದ್ಧಿ ಮಾಡುವುದಕ್ಕೆ. ಆರೋಪ ಪ್ರತ್ಯಾರೋಪ ದೂಷಣೆ ಮಾಡುತ್ತಾ ಕನ್ನಡಿಗರಿಗೆ ಅವಮಾನ ಮಾಡುತ್ತಿದ್ದಾರೆ. ದಸರಾ ವೇಳೆ ಚಾಮುಂಡೇಶ್ವರಿ ಪೂಜಿಸುವ ಸಂದರ್ಭದಲ್ಲಿ ನೊಂದು ಹೇಳುತ್ತಿದ್ದೇನೆ. ಈ ರೀತಿ ಬೀದಿಯಲ್ಲಿ ಕಿತ್ತಾಟ ಮಾಡೋದು ಸರಿಯೇ ಎಂದು ಆತ್ಮಾವಲೋಕನಾ ಮಾಡಿಕೊಳ್ಳಬೇಕಿದೆ ಎಂದರು.
ಚುನಾವಣೆಗೆ ಇನ್ನೂ 4 ವರ್ಷ ಇದೆ. ಈ ಬೆಳವಣಿಗೆ ರಾಜ್ಯದ ಜನರಿಗೆ ಎಳ್ಳಷ್ಟು ಇಷ್ಟವಿಲ್ಲ. ಇದೇ ರೀತಿ ಮುಂದುವರೆದರೆ ಜನ ಕಲ್ಲಲ್ಲಿ ಹೊಡೆಯುತ್ತಾರೆ. ನಾನು ಮೂರು ಪಕ್ಷಗಳಿಗೆ ಎಚ್ಚರಿಕೆಯಾಗಿ ಹೇಳುತ್ತಿದ್ದೇನೆ ದಿನೇ ದಿನೇ ಇದೇ ವಿಚಾರವನ್ನ ದೊಡ್ಡದು ಮಾಡಬಾರದು. ಚನ್ನಪಟ್ಟಣ ಚುನಾವಣೆಗೆ 50 ಕೋಟಿ ರೂ. ಡಿಮ್ಯಾಂಡ್ ವಿಚಾರ ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ. ದೂಷಣೆಗಳೇ ಹೆಚ್ಚಾಗಿವೆ. ಇದರಿಂದ ಕನ್ನಡಿಗರಿಗೆ ಮುಜುಗರ ತರುತ್ತಿದೆ ಎಂದು ಎಚ್ಚರಿಸಿದರು.
ಸಾಕಷ್ಟು ಸಮಸ್ಯೆಗಳು ಇವೆ. ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು. ಅದನ್ನ ಬಿಟ್ಟು ಬೀದಿಗಿಳಿದು ಕಿತ್ತಾಡುವುದು ಸರಿಯಲ್ಲ. ಇದನ್ನ ಆತ್ಮಾವಲೋಕನ ಮಾಡಿಕೊಳ್ಳಬೇಕು. ಜನ ನಿರೀಕ್ಷೆ ಮಾಡುತ್ತಿರುವುದು ರಾಜ್ಯದ ಅಭಿವೃದ್ಧಿ, ರೈತರ ಅಭಿವೃದ್ಧಿ, ಯುವ ಜನಪರ ಅಭಿವೃದ್ಧಿ. ಯಾವುದೇ ರಾಜಕೀಯ ಪಕ್ಷವಿರಲಿ ಇದರ ಬಗ್ಗೆ ಅವರು ಗಮನಹರಿಸಬೇಕು. ಜನ ಅಂತಹ ಪರಿಸ್ಥಿತಿಗೆ ಇಳಿಯಬಹುದು. ನ್ಯಾಯಾಲಯ ತೀರ್ಪು ಕೊಡಲಿದೆ. ಎಲ್ಲರ ಮೇಲೆ ತನಿಖೆಗಳು ನಡೆಯುತ್ತಿವೆ. ಆದೇಶಗಳು ಬರುವವರೆಗೆ ಕಾಯಬೇಕು. ಪ್ರತಿದಿನ ಇದನ್ನೇ ದೊಡ್ಡದು ಮಾಡುವುದು ಸರಿಯಲ್ಲ ಎಂದಿದ್ದಾರೆ.