ಬೆಂಗಳೂರು: ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 9ರಿಂದ 12ರವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರಿನಿಂದ ರಾಜ್ಯ ಮತ್ತು ಅಂತರ್ರಾಜ್ಯದ ವಿವಿಧ ಸ್ಥಳಗಳಿಗೆ 2000ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.
ಹೆದ್ದಾರಿಯಲ್ಲಿ ಧಗಧಗನೆ ಹೊತ್ತಿ ಉರಿದ ಕಾರು: ಸ್ವಲ್ಪದರಲ್ಲೇ ಪಾರಾದ ಪ್ರಯಾಣಿಕರು!
ಮೈಸೂರು ದಸರಾ ಹಾಗೂ ದಸರಾ ರಜೆ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿಯು ಪ್ರವಾಸಿಗರು, ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಮೈಸೂರು ಸೇರಿದಂತೆ ರಾಜ್ಯದ ಹಲವು ಪ್ರದೇಶಗಳಿಗೆ ಹೆಚ್ಚುವರಿಯಾಗಿ 2 ಸಾವಿರ ವಿಶೇಷ ಬಸ್ಗಳನ್ನು ಕಾರ್ಯಾಚರಣೆಗೊಳಿಸುತ್ತಿದೆ.
ರಾಜ್ಯ ಹಾಗೂ ದೇಶದ ವಿವಿಧೆಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರು ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮ, ಪ್ರಸ್ತುತ ಕಾರ್ಯಾಚರಿಸುತ್ತಿರುವ ವೇಗದೂತ, ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್, ಪಲ್ಲಕ್ಕಿ ಸ್ಲೀಪರ್, ಅಶ್ವಮೇಧ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್ ಸೌಲಭ್ಯ ಒದಗಿಸಲು ಕ್ರಮ ಕೈಗೊಂಡಿದೆ.