ದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 18ನೇ ಕಂತನ್ನು ಮಹಾರಾಷ್ಟ್ರದ ವಾಶಿಮ್ನಲ್ಲಿ ಅಕ್ಟೋಬರ್ 5ರಂದು ಬಿಡುಗಡೆ ಮಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18ನೇ ಕಂತನ್ನು ಇಂದು ಮಹಾರಾಷ್ಟ್ರದಲ್ಲಿ ಬಿಡುಗಡೆ ಮಾಡಿದರು. ಈ ಮೂಲಕ 9.4 ಕೋಟಿ ರೈತರಿಗೆ 20,000 ಕೋಟಿ ರೂ.ಗಳನ್ನು ಒದಗಿಸಿದರು. ಕೃಷಿ ಬೆಂಬಲ ಮತ್ತು ಗ್ರಾಮೀಣ ಅಭಿವೃದ್ಧಿಗೆ ಸರ್ಕಾರದ ಬದ್ಧತೆಯನ್ನು ಬಲಪಡಿಸಿದರು.
ಈ ಸಂದರ್ಭದಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾದ ಸಿ.ಪಿ. ರಾಧಾಕೃಷ್ಣನ್, ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್, ರಾಜೀವ್ ರಂಜನ್ ಸಿಂಗ್, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಮುಂತಾದವರು ಉಪಸ್ಥಿತರಿದ್ದರು.
732 ಕೃಷಿ ವಿಜ್ಞಾನ ಕೇಂದ್ರಗಳು (ಕೆವಿಕೆಗಳು), 1 ಲಕ್ಷಕ್ಕೂ ಹೆಚ್ಚು ಪ್ರಾಥಮಿಕ ಕೃಷಿ ಸಹಕಾರ ಸಂಘಗಳು ಮತ್ತು ವೆಬ್ಕಾಸ್ಟ್ ಮೂಲಕ ದೇಶಾದ್ಯಂತ 5 ಲಕ್ಷ ಸಾಮಾನ್ಯ ಸೇವಾ ಕೇಂದ್ರಗಳು ಸೇರಿದಂತೆ ಸುಮಾರು 2.5 ಕೋಟಿ ರೈತರು ಈ ಕಾರ್ಯಕ್ರಮದಲ್ಲಿ ಸೇರಿದ್ದಾರೆ. ಬಿಡುಗಡೆಯ ದಿನವನ್ನು PM-KISAN Utsav Divas ಎಂದು ಆಚರಿಸುವ ವಿಶೇಷ ಕಾರ್ಯಕ್ರಮಗಳನ್ನು ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಯೋಜಿಸಲಾಗಿದೆ.