ಬೆಂಗಳೂರು:- ಕರ್ನಾಟಕದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಳಿದಿರುವ ಚಪಾತಿ ಹಿಟ್ಟನ್ನು ಫ್ರಿಜ್ ನಲ್ಲಿಟ್ಟು ಬಳಸುತ್ತೀರಾ ? ಹುಷಾರ್, ಈ ಅಪಾಯ ಕಾಡಬಹುದು !
ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದಿದೆ. ಮುಂದಿನ 5 ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಅಧಿಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮಳೆಯ ವಾತಾವರಣ ಕಂಡು ಬರುತ್ತಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದೆ. ಉತ್ತರ ಕರ್ನಾಟಕದ ಭಾಗದಲ್ಲಿ ಮಳೆ ಚುರುಕಾಗಿದ್ದು, ಧಾರಾಕಾರ ಮಳೆ ಸುರಿದು ಜನ ತತ್ತರಿಸುವಂತೆ ಮಾಡಿದೆ. ಇದೀಗ ದಕ್ಷಿಣ ಕರ್ನಾಟಕ ಭಾಗದಲ್ಲಿಯೂ ಮಳೆ ಅಬ್ಬರ ಜೋರಾಗಿದೆ.
ಮುಂದಿನ ಐದು ದಿನಗಳಿಂದ ಒಂದು ವಾರದವರೆಗೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ರಾಮನಗರ, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರ, ಕೊಡಗು, ಜಿಲ್ಲೆಗಳಲ್ಲಿ ಅಧಿಕ ಮಳೆ ಸುರಿಯಲಿದ್ದು, ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.