ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಧಾರಕಾರ ಮಳೆ ಸುರಿದ ಹಿನ್ನೆಲೆ, ಐದಾರು ಮನೆಗಳಿಗೆ ನೀರು ನುಗ್ಗಿದೆ.
ಕರ್ನಾಟಕದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆ!
ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಇನ್ನು ರಾಜಕಾಲುವೆ ಮುಚ್ಚಿರುವ ಕಾರಣ ಮನೆಗಳಿಗೆ ಮಳೆ ನೀರು ನುಗ್ಗಿದೆ.
ಯಲಹಂಕ ತಾಲೂಕಿನ ಅಟ್ಟೂರು ಗ್ರಾಮದಲ್ಲಿ ಐದಾರು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಪರಿಣಾಮ ಮನೆಗಳಲ್ಲಿನ ಗೃಹೋಪಯೋಗಿ ವಸ್ತುಗಳು ಹಾನಿಯಾಗಿದೆ.
ಮನೆಗಳಲ್ಲಿನ ನೀರು ಹೊರ ಹಾಕಲು ಕುಟುಂಬಸ್ಥರು ಪರದಾಟ ನಡೆಸಿದ್ದಾರೆ. ಪ್ರತಿ ಬಾರಿಯೂ ಭಾರಿ ಮಳೆಯಾದರೆ ಮನೆಗಳಿಗೆ ನೀರು ನುಗ್ಗುತ್ತದೆ. ಆದರೂ, ಸರ್ಕಾರ ಇತ್ತ ಗಮನಹರಿಸಿಲ್ಲ ಎನ್ನಲಾಗಿದೆ