ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ ಜಿಡಿ ದೇವೇಗೌಡರ ಹೇಳಿಕೆಯಿಂದ ಎನ್ಡಿಎ ನಾಯಕರು ಮುಜುಗರಕ್ಕೆ ಒಳಗಾಗಿದ್ದಾರೆ. ಜಿಟಿ ದೇವೇಗೌಡರ ಈ ಹೇಳಿಕೆಯಿಂದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಮುನಿಸಿಕೊಂಡಿದ್ದಾರೆ. ಜಿಟಿ ದೇವೇಗೌಡರ ಹೇಳಿಕೆ ಬಗ್ಗೆ ಹೆಚ್.ಡಿ.ದೇವೇಗೌಡ ಆಪ್ತರ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.
Hubballi: ದತ್ತಾತ್ರೇಯ ದೇವರ ಮೂರ್ತಿಯನ್ನ ಭಗ್ನಗೊಳಿಸಿದ ಕಿಡಿಗೇಡಿಗಳು!
ಇನ್ನು, ಜಿ.ಟಿ.ದೇವೇಗೌಡ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್ನ ಹಾಲಿ ಮತ್ತು ಮಾಜಿ ಶಾಸಕರು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರಿಗೆ ಮನವಿ ಮಾಡಿದ್ದಾರೆ. ಜಿ.ಟಿ.ದೇವೇಗೌಡ ಅವರ ಹೇಳಿಕೆಯಿಂದ ಪಕ್ಷಕ್ಕೆ ಸಾಕಷ್ಟು ಡ್ಯಾಮೇಜ್ ಆಗಿದೆ. ಜಿಟಿ ದೇವೇಗೌಡ ಅವರ ಹೇಳಿಕೆಯಿಂದ ಎನ್ಡಿಎ ಮೈತ್ರಿಕೂಟದ ಮುಡಾ ಹೋರಾಟಕ್ಕೆ ಹಿನ್ನಡೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪರ ಜಿ.ಟಿ.ದೇವೇಗೌಡ ಹೇಳಿಕೆಯಿಂದ ದೊಡ್ಡ ಹೊಡೆತ ಬಿದ್ದಿದೆ. ಇದರಿಂದ ಮುಂಬರುವ ಚುನಾವಣೆಗಳಲ್ಲಿ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ಗೆ ದೊಡ್ಡ ಹೊಡೆತ ಬೀಳಲಿದೆ. ಜಿಟಿ ದೇವೇಗೌಡ ಅವರ ಹೇಳಿಕೆ ಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಸ್ತ್ರವಾಗಿ ಬಳಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಜಿಟಿಡಿ ಮಾತಿಗೆ ಬ್ರೇಕ್ ಹಾಕಬೇಕು ಎಂದು ಮನವಿ ಮಾಡಿದ್ದಾರೆ.
ಆದರೆ, ಹೆಚ್ಡಿ ದೇವೇಗೌಡ ಅವರು ಮಾತ್ರ ಸದ್ಯಕ್ಕೆ ಯಾವುದೇ ಆತುರದ ನಿರ್ಧಾರ ಬೇಡ ಎಂದು ಮೌನಕ್ಕೆ ಜಾರಿದ್ದಾರೆ.