ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲನುಭವಿಸಿದ್ದ ಟೀಂ ಇಂಡಿಯಾ ತನ್ನ ಎರಡನೇ ಪಂದ್ಯದಲ್ಲಿ ಕಮ್ ಬ್ಯಾಕ್ ಮಾಡಿದ್ದು, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 6 ವಿಕೆಟ್ಗಳಿಂದ ಸೋಲಿಸಿದೆ.
ವೈದ್ಯರ ನಿರ್ಲಕ್ಷ್ಯ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು!
ಈ ಗೆಲುವಿನೊಂದಿಗೆ ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ ವಿರುದ್ಧ ಅಧಿಕ ಪಂದ್ಯಗಳನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆ ಟೀಂ ಇಂಡಿಯಾ ಪಾತ್ರವಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಭಾರತದ ಬೌಲರ್ಗಳ ಸಾಂಘೀಕ ದಾಳಿಗೆ ತತ್ತರಿಸಿ ಕೇವಲ 105 ರನ್ ಗಳಿಸಲಷ್ಟೇ ಶಕ್ತವಾಯಿತು. ಆದಾಗ್ಯೂ, ಈ ಅಲ್ಪ ಗುರಿ ಬೆನ್ನಟ್ಟಿದ್ದ ಭಾರತ ತಂಡಕ್ಕೆ ಮತ್ತೊಮ್ಮೆ ಉತ್ತಮ ಆಂಭ ಸಿಗಲಿಲ್ಲ. ಆದರೆ ನಾಯಕಿ ಹರ್ಮನ್ಪ್ರೀತ್ ಕೌರ್ ಅತ್ಯುತ್ತಮ ಇನ್ನಿಂಗ್ಸ್ ಆಡಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಇದರೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್ ತಲುಪುವ ಭರವಸೆಯನ್ನು ಇನ್ನು ಜೀವಂತವಾಗಿ ಉಳಿಸಿಕೊಂಡಿದೆ.
ಪಾಕ್ ನೀಡಿದ 105 ರನ್ಗಳ ಗುರಿ ಬೆನ್ನಟ್ಟಿದ ಭಾರತ ಮಹಿಳಾ ತಂಡ ಮತ್ತೊಮ್ಮೆ ಉತ್ತಮ ಆರಂಭ ಪಡೆಯಲಿಲ್ಲ. ಮತ್ತೊಮ್ಮೆ ನಿರಾಸೆ ಮೂಡಿಸಿದ ಸ್ಮೃತಿ ಮಂಧಾನ ಕೇವಲ ಏಳು ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಇದಾದ ನಂತರ ಬಂದ ಜೆಮಿಮಾ, ಶಫಾಲಿ ಜೊತೆಗೂಡಿ ಎರಡನೇ ವಿಕೆಟ್ಗೆ 43 ರನ್ಗಳ ಜೊತೆಯಾಟ ಹಂಚಿಕೊಂಡರು. ಈ ವೇಳೆ ಶಫಾಲಿ 32 ರನ್ಗಳ ಇನ್ನಿಂಗ್ಸ್ ಆಡಿ ವಿಕೆಟ್ ಒಪ್ಪಿಸಿದರು. ಅವರ ಹಿಂದೆ ಜೆಮಿಮಾ ಕೂಡ 23 ರನ್ಗಳ ಇನ್ನಿಂಗ್ಸ್ ಆಡಿ ಬ್ಯಾಟ್ ಎತ್ತಿಟ್ಟರು.
ಆ ಬಳಿಕ ಇನ್ನಿಂಗ್ಸ್ ಜವಬ್ದಾರಿ ಹೊತ್ತುಕೊಂಡ ನಾಯಕಿ ಹರ್ಮನ್ಪ್ರೀತ್ ಸಿಂಗ್ ಪಾಕಿಸ್ತಾನದ ಬೌಲರ್ಗಳ ಲೆಕ್ಕಾಚಾರವನ್ನು ಬುಡಮೇಲು ಮಾಡಿದರು. 29 ರನ್ಗಳ ಗೆಲುವಿನ ಇನ್ನಿಂಗ್ಸ್ ಆಡುವ ಮೂಲಕ ಹರ್ಮನ್ಪ್ರೀತ್ ತಂಡವನ್ನುಯ ಗೆಲುವಿನ ಹತ್ತಿರಕ್ಕೆ ಕೊಂಡೊಯ್ದರು. ಕೊನೆಯದಾಗಿ ದೀಪ್ತಿ ಶರ್ಮಾ ಮತ್ತು ಸಜೀವನ್ ಸಜ್ನಾ ಕ್ರಮವಾಗಿ ಅಜೇಯ ಏಳು ಮತ್ತು ನಾಲ್ಕು ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಬಾಂಗ್ಲಾದೇಶ ಪರ ಫಾತಿಮಾ ಸನಾ ಎರಡು ಹಾಗೂ ಸಾದಿಯಾ ಮತ್ತು ಒಮೈಮಾ ತಲಾ ಒಂದು ವಿಕೆಟ್ ಪಡೆದರು.