ಪೋಕ್ಸೊ ಪ್ರಕರಣ ದಾಖಲಾಗಿರುವ ಹಿನ್ನೆಲೆ, ಜಾನಿ ಮಾಸ್ಟರ್ಗೆ ನೀಡಲಾಗಿದ್ದ ರಾಷ್ಟ್ರ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ.
ನವಲಗುಂದ: ಹೆಣ್ಣು ಮಕ್ಕಳ ಮಹತ್ವದ ಬಗ್ಗೆ ಅರಿವು ಮೂಡಿಸಿ: ತಹಶೀಲ್ದಾರ್ ಸುಧೀರ ಸಾಹುಕಾರ!
ತಮಿಳಿನ ‘ತಿರುಚಿತ್ರಂಬಲಂ’ ಚಿತ್ರಕ್ಕಾಗಿ ಜಾನಿ ಮಾಸ್ಟರ್ ಅತ್ಯುತ್ತಮ ನೃತ್ಯ ಸಂಯೋಜಕ ಪ್ರಶಸ್ತಿಯನ್ನು ಸ್ವೀಕರಿಸಬೇಕಿತ್ತು. ಅಕ್ಟೋಬರ್ 8ರಂದು ದೆಹಲಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಬೇಕಿತ್ತು. ಪ್ರಶಸ್ತಿ ಸ್ವೀಕರಿಸಲು ಜಾನಿ ಮಾಸ್ಟರ್ಗೆ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿತ್ತು. ಆದರೆ ಪ್ರಶಸ್ತಿ ರದ್ದತಿಯಿಂದಾಗಿ ಜಾನಿ ಮಾಸ್ಟರ್ ಮಧ್ಯಂತರ ಜಾಮೀನು ವಿಚಾರದಲ್ಲಿ ಇಕ್ಕಟ್ಟಿಗೆ ಸಿಲುಕಿದ್ದಾರೆ.
ಜಾನಿ ಮಾಸ್ಟರ್ ‘ಅತ್ಯುತ್ತಮ ನೃತ್ಯ ಸಂಯೋಜಕ’ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾದ ಕೆಲವು ದಿನಗಳ ನಂತರ, ಅತ್ಯಾಚಾರದ ಆರೋಪದ ಮೇಲೆ ಅವರನ್ನು ಬಂಧಿಸಲಾಯಿತು. ತಮಗೆ ಲೈಂಗಿಕ ಕಿರುಕುಳ ಆಗಿದೆ ಎಂದು ಅವರ ಸಹೋದ್ಯೋಗಿಯೇ ಆರೋಪಿಸಿದ್ದರು. ಹೈದರಾಬಾದ್ ಮತ್ತು ಮುಂಬೈನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ
ಜಾನಿ ಮತ್ತು ಅವರ ಪತ್ನಿ ತಮಗೆ ಥಳಿಸುತ್ತಿದ್ದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಸಂತಸ್ತೆಗೆ ಈಗ 21 ವರ್ಷ. ಅಪ್ರಾಪ್ತೆ ಆದಾಗಿನಿಂದಲೂ ತಮಗೆ ಲೈಂಗಿಕ ಕಿರುಕುಳ ಆಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಹೀಗಾಗಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಾಗಿದೆ. ನರಸಿಂಗಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.