ಬಾಂಗ್ಲಾದೇಶ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್ನಲ್ಲಿ ಭಾರತ ತಂಡವು 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು? ನೀವು ತಿಳಿಯಲೇಬೇಕಾದ ವಿಚಾರ!
ಇದರಲ್ಲಿ ಹಾರ್ದಿಕ್ ಪಾಂಡ್ಯ ಅವರು ಭರ್ಜರಿ ಬ್ಯಾಟಿಂಗ್ ಮಾಡಿ ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ್ದಾರೆ.
ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 19.5 ಓವರ್ಗಳಲ್ಲಿ 127 ರನ್ಗಳಿಸಿ ಆಲೌಟ್ ಆಗಿತ್ತು. 128 ರನ್ಗಳ ಗುರಿ ಪಡೆದ ಟೀಮ್ ಇಂಡಿಯಾ ಉತ್ತಮ ಪಡೆದಿರಲಿಲ್ಲ.
ಯುವ ಸ್ಪೋಟಕ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ 16 ರನ್ಗಳಿಸಿ ರನೌಟ್ಗೆ ಬಲಿಯಾದರು. ಆ ಬಳಿಕ ಬಂದ ಸೂರ್ಯಕುಮಾರ್ ಯಾದವ್ ಕೇವಲ 14 ಎಸೆತಗಳಲ್ಲಿ 29 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಆರಂಭಿಕನಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ (29) ಸಹ ಪೆವಿಲಿಯನ್ನತ್ತ ಮುಖ ಮಾಡಿದರು.
ಈ ಹಂತದಲ್ಲಿ ಕಣಕ್ಕಿಳಿದ ಹಾರ್ದಿಕ್ ಪಾಂಡ್ಯ ಅತ್ಯಾಕರ್ಷಕ ಬ್ಯಾಟಿಂಗ್ನೊಂದಿಗೆ ಗಮನ ಸೆಳೆದರು. ಬಾಂಗ್ಲಾ ಬೌಲರ್ಗಳನ್ನು ನಿರಾಯಾಸವಾಗಿ ಎದುರಿಸಿದ ಪಾಂಡ್ಯ ಕೇವಲ 16 ಎಸೆತಗಳಲ್ಲಿ 4 ಫೋರ್ ಹಾಗೂ 2 ಭರ್ಜರಿ ಸಿಕ್ಸ್ನೊಂದಿಗೆ ಅಜೇಯ 39 ರನ್ ಚಚ್ಚಿದರು.
ಅದರಲ್ಲೂ ತಂಡದ ಗೆಲುವಿಗೆ ಕೇವಲ 1 ರನ್ ಅವಶ್ಯಕತೆಯಿದ್ದಾಗ ತಸ್ಕಿನ್ ಅಹ್ಮದ್ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಭರ್ಜರಿ ಸಿಕ್ಸರ್ ಸಿಡಿಸಿ ಪಂದ್ಯವನ್ನು ಅಂತ್ಯಗೊಳಿಸಿದರು. ಇದರೊಂದಿಗೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದು ಪಾಂಡ್ಯ ಪಾಲಾಯಿತು.
ಅಂದರೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ಸಿಕ್ಸ್ ಸಿಡಿಸಿ ಅತೀ ಹೆಚ್ಚು ಬಾರಿ ಪಂದ್ಯವನ್ನು ಕೊನೆಗೊಳಿಸಿದ ವಿಶೇಷ ದಾಖಲೆಯೊಂದು ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ ಒಟ್ಟು 4 ಬಾರಿ ಸಿಕ್ಸ್ ಬಾರಿಸಿ ಪಂದ್ಯವನ್ನು ಅಂತ್ಯಗೊಳಿಸಿದ್ದರು.
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಹಾರ್ದಿಕ್ ಪಾಂಡ್ಯ ಯಶಸ್ವಿಯಾಗಿದ್ದಾರೆ. ಬಾಂಗ್ಲಾ ವಿರುದ್ಧ ಸಿಕ್ಸ್ ಸಿಡಿಸಿ ಪಂದ್ಯವನ್ನು ಅಂತ್ಯಗೊಳಿಸುವುದರೊಂದಿಗೆ, ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ ಸಿಕ್ಸ್ ಬಾರಿಸಿ ಮ್ಯಾಚ್ ಕೊನೆಗೊಳಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡರು