ಕೋಲಾರ : ಶೇ.60% ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹಿಸಿ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಕರವೇ, ಮಾಲೂರು ತಾಲೂಕು ಅಧ್ಯಕ್ಷ ಶ್ರೀನಿವಾಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ಪುತ್ಥಳ್ಳಿಗೆ ಮಾಲಾರ್ಪಣೆ ಮಾಡಿ ಮಾಲೂರು ಪುರಸಭೆ ಕಚೇರಿಯವರೆಗೂ ಕರವೇ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ನೂರಕ್ಕೂ ಹೆಚ್ಚು ಜನರು ಮೆರವಣಿಗೆಯಲ್ಲಿ ಭಾಗಿಯಾಗಿ ಕೋಲಾರ ಜಿಲ್ಲೆಯಲ್ಲಿ ಶೇ. 60% ರಷ್ಟು ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿದ್ದಾರೆ. ಶೇ.60% ಕನ್ನಡ ನಾಮಫಲಕ ಕಡ್ಡಾಯಕ್ಕೆ ಗಡುವು ನೀಡಿದ್ದು, ಇಲ್ಲವಾದರೆ ಉಗ್ರವಾದ ಹೋರಾಟ ಮಾಡುವುದಾಗಿ ಮಾಲೂರು ಪುರಸಭೆ ಆಯುಕ್ತರಿಗೆ ಮನವಿ ಸಲ್ಲಿಸಿ ಎಚ್ಚರಿಕೆ ನೀಡಿದ್ದಾರೆ.