ಬೆಂಗಳೂರು:- ಕರ್ನಾಟಕದ 9 ಜಿಲ್ಲೆಗಳಿಗೆ ನಾಳೆ ಭಾರೀ ಮಳೆ ಹಾಗೂ ಕೆಲವೆಡೆ ಅತಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
World record: ಪಾಕ್ ಹೆಸರಿನಲ್ಲಿದ್ದ ವಿಶ್ವ ದಾಖಲೆ ಮುರಿದ ಟೀಮ್ ಇಂಡಿಯಾ!
ಅತಿ ಭಾರೀ ಮಳೆಯು ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಆಗಲಿದ್ದು ಆರೆಂಜ್ ಅಲರ್ಟ್ ನೀಡಲಾಗಿದೆ. ಅಲ್ಲದೆ ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆಮಂಡ್ಯ , ಮೈಸೂರ ಹಾಗೂ ಶಿವಮೊಗ್ಗ ಮತ್ತು ತುಮಕೂರಿಗೆ ಭಾರೀ ಮಳೆ ಆಗಲಿರುವ ಹಿನ್ನೆಲೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಅಲ್ಲದೆ ದಕ್ಷಿಣ ಒಳನಾಡಿನಲ್ಲಿ ಶುಕ್ರವಾರದವರೆಗೂ ಹಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ ನಾಲ್ಕು ದಿನವೂ ಭಾರೀ ಮಳೆಯಾಗಲಿರುವ ಹಿನ್ನೆಲೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ರೈತರಿಗೆ ತಲೆಬಿಸಿ ಹೆಚ್ಚಾಗಿದೆ. ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಜಿಲ್ಲೆಯ ಬೆಳೆಗಳಾದ ಮೆಕ್ಕೆಜೋಳ, ರಾಗಿ ಬೆಳೆಗೆ ಹಾನಿಯಾಗುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ.