ನವದೆಹಲಿ: ಹರ್ಯಾಣ ಚುನಾವಣೆಯಲ್ಲಿ ಜೂಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಕುಸ್ತಿ ಪಟು ವಿನೇಶ್ ಫೋಗಟ್ 5 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಯೋಗೇಶ್ ಕುಮಾರ್ ಮತ್ತು ವಿನೇಶ್ ಫೋಗಟ್ ಮಧ್ಯೆ ನೇರಾನೇರಾ ಪೈಪೋಟಿ ಇತ್ತು.
ಆರಂಭದ ಮತ ಎಣಿಕೆಯಲ್ಲಿ ವಿನೇಶ್ ಫೋಗಟ್ ಅವರಿಗೆ ಮುನ್ನಡೆ ಸಿಕ್ಕಿದರೆ ನಂತರ ಯೋಗೇಶ್ ಕುಮಾರ್ ಅವರಿಗೆ ಮುನ್ನಡೆ ಸಿಕ್ಕಿತ್ತು. ಅಂತಿಮ ಸುತ್ತುಗಳ ಮತ ಎಣಿಕೆಯಲ್ಲಿ ಕಾಂಗ್ರೆಸ್ ಹೆಚ್ಚು ಮತಗಳು ಬಿದ್ದ ಪರಿಣಾಮ ವಿನೇಶ್ ಫೋಗಟ್ ಮೊದಲ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದಾರೆ.
ಹರ್ಯಾಣ ಚುನಾವಣೆಯಲ್ಲಿ ಕಿಸಾನ್, ಜವಾನ್, ಪೈಲ್ವಾನ್ ಘೋಷ ವಾಕ್ಯವನ್ನು ಇಟ್ಟುಕೊಂಡು ಕಾಂಗ್ರೆಸ್ ಚುನಾವಣೆ ಎದುರಿಸಿತ್ತು. ಮತ ಎಣಿಕೆಯ ಆರಂಭದ ಸುತ್ತುಗಳಲ್ಲಿ ಹರ್ಯಾಣದಲ್ಲಿ ಕಾಂಗ್ರೆಸ್ಗೆ ಮುನ್ನಡೆ ಸಿಕ್ಕಿತ್ತು. ನಂತರ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಾಹ್ನ 1 ಗಂಟೆಯ ಟ್ರೆಂಡ್ ಪ್ರಕಾರ ಬಿಜೆಪಿ 48, ಕಾಂಗ್ರೆಸ್ 35, ಇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.