ಬಾಲಿವುಡ್ ನಟ ಇಮ್ರಾನ್ ಹಶ್ಮಿ ಸದ್ಯ ಗೂಢಚಾರಿ 2 ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಚಿತ್ರೀಕರಣದಲ್ಲಿ ಇಮ್ರಾನ್ ಹಶ್ಮಿ ತೊಡಗಿಕೊಂಡಿದ್ದಾರೆ. ಈ ಮಧ್ಯೆ ಆ್ಯಕ್ಷನ್ ಸೀಕ್ವೆನ್ಸ್ ಚಿತ್ರೀಕರಿಸುವಾಗ ಕುತ್ತಿಗೆಗೆ ಪೆಟ್ಟಾಗಿದ್ದು, ನಟನಿಗೆ ಚಿಕಿತ್ಸೆ ನೀಡಲಾಗಿದೆ.
ತೆಲುಗಿನ ‘ಗೂಢಚಾರಿ 2’ ಸಿನಿಮಾದ ಶೂಟಿಂಗ್ ಹೈದರಾಬಾದ್ನಲ್ಲಿ ನಡೆಯುತ್ತಿದ್ದು, ಇಮ್ರಾನ್ ಹಶ್ಮಿ ಕೂಡ ಚಿತ್ರತಂಡ ಸೇರಿಕೊಂಡಿದ್ದರು. ಆ್ಯಕ್ಷನ್ ದೃಶ್ಯ ಚಿತ್ರೀಕರಿಸುವಾಗ ಜಂಪ್ ಮಾಡುವ ವೇಳೆ, ಇಮ್ರಾನ್ ಕುತ್ತಿಗೆಗೆ ಗಾಯವಾಗಿದೆ. ಕೂಡಲೇ ಚಿತ್ರೀಕರಣ ನಿಲ್ಲಿಸಿ ನಟನಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಇಮ್ರಾನ್ ವಿಶ್ರಾಂತಿ ಪಡೆಯುತ್ತಿದ್ದಾರೆ. ಸದ್ಯ ಇಮ್ರಾನ್ಗೆ ಗಾಯವಾಗಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
‘ಗೂಢಚಾರಿ 2’ ಸಿನಿಮಾದ ಮೂಲಕ ಇಮ್ರಾನ್ ಹಶ್ಮಿ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಎಂಟ್ರಿಕೊಡ್ತಿದ್ದಾರೆ. ಚಿತ್ರದಲ್ಲಿ ಅಡವಿ ಶೇಷ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.