ಮೈಸೂರು: ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. 5 ವರ್ಷ ಇರುತ್ತಾರೋ, 3 ವರ್ಷವೋ ಇರುತ್ತಾರೋ ಅದು ನನಗೆ ಗೊತ್ತಿಲ್ಲ. ನೀವು ಅದನ್ನ ಹೈ ಕಮಾಂಡ್ಗೆ ಕೇಳಬೇಕು. ಆದರೆ ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿಗಳು.
ಇದರಲ್ಲಿ ಬೇರೆ ಯಾವುದೇ ಪ್ರಶ್ನೆ ಇಲ್ಲ. ನಾನು ಅವರ ಜೊತೆಯಲ್ಲಿ ಸಚಿವನಾಗಿ ಕೆಲಸ ಮಾಡುತ್ತೇನೆ. ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ. ಆ ರೀತಿಯ ಯಾವುದೇ ಚರ್ಚೆಗಳೂ ನಡೆದಿಲ್ಲ. ವಿಪಕ್ಷಗಳು, ಮಾಧ್ಯಮಗಳು, ಚರ್ಚೆ ಮಾಡುತ್ತಿವೆ. ವಿಪಕ್ಷ ನಾಯಕರು ಪ್ರೀತಿಯಿಂದ ನಮ್ಮ ಹೆಸರು ಹೇಳುತ್ತಿದ್ದಾರೆ ಅಷ್ಟೇ.
ಆದರೆ ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಚರ್ಚೆ ನಡೆದಿಲ್ಲ. ನಾನು ಈ ವಿಚಾರವನ್ನು ಹಲವು ಬಾರಿ ಸ್ಪಷ್ಟ ಪಡಿಸಿದ್ದೇನೆ. ಅವರ ಬೆಂಬಲಿಗರು ಅವರ ನಾಯಕರಿಗೆ ಮುಂದಿನ ಸಿಎಂ ಎಂದು ಜೈಕಾರ ಹಾಕುವುದು ಸರ್ವೇ ಸಾಮಾನ್ಯ. ಅದನ್ನು ಇಟ್ಟುಕೊಂಡು ಏನೋ ಬದಲಾವಣೆ ಆಗುತ್ತದೆ ಎನ್ನುವುದು ಸರಿಯಲ್ಲ ಎಂದು ಹೇಳಿದರು.