ಹುಬ್ಬಳ್ಳಿ: ಚುನಾವಣೋತ್ತರ ಸಮೀಕ್ಷೆ ಬಗ್ಗೆ ನನಗೆ ಯಾವುದೇ ನಂಬಿಕೆ ಇಲ್ಲ. ಕರ್ನಾಟಕದಲ್ಲೂ ಅದು ಸುಳ್ಳಾಗಿತ್ತು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
Daytime Sleeping: ಹಗಲಿನಲ್ಲಿ ಮಲಗುವುದು ಒಳ್ಳೆಯ ಅಭ್ಯಾಸವೇ..? ಇಲ್ಲ ಆರೋಗ್ಯಕ್ಕೆ ಕೆಟ್ಟದಾ..?
ಮಂಗಳವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರಿಯಾಣ ಮತ್ತು ಜಮ್ಮು-ಕಾಶ್ಮೀರ ಚುನಾವಣೆ ಫಲಿತಾಂಶ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಹರಿಯಾಣದಲ್ಲಿ ಯಾಕೆ ಹಿನ್ನಡೆಯಾಗಿದೆ ಎಂಬುದರ ಬಗ್ಗೆ ಪಕ್ಷದೊಳಗೆ ಚರ್ಚೆಯಾಗುತ್ತದೆ. ಹರಿಯಾಣವು ದೆಹಲಿಗೆ ಹತ್ತಿರವಿರುವ ರಾಜ್ಯ. ರಾಜಕೀಯವಾಗಿ ಸಾಕಷ್ಟು ಮಹತ್ವ ಇದೆ. ಅಲ್ಲಿ ಅಧಿಕಾರಕ್ಕೆ ಬರುವ ನಿರೀಕ್ಷೆ ಇತ್ತು. ಆದರೆ ಹುಸಿಯಾಗಿದೆ ಎಂದರು.
ಜಮ್ಮು-ಕಾಶ್ಮೀರಲ್ಲಿ ಇಂಡಿಯಾ ಒಕ್ಕೂಟಕ್ಕೆ ಗೆಲುವಾಗಿದೆ. ಬಹಳ ದಿನದ ನಂತರ ಚುನಾವಣೆ ನಡೆದಿತ್ತು. ನಮಗೆ ಗೆಲುವಾಗಿದೆ ಎಂದರು.
ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ವಿಚಾರದಲ್ಲಿ ಯಾವುದೇ ಚರ್ಚೆ ಇಲ್ಲ. ಯಾವುದೇ ಲಾಭಿ ಮತ್ತು ಘೋಷಣೆಯೂ ಇಲ್ಲ. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಕೆಳಗೆ ನಾವು ಕೆಲಸ ಮಾಡುತ್ತಿದ್ದೇವೆ ಎಂದರು.
ತಾವು ಮುಖ್ಯಮಂತ್ರಿ ಆಗುವ ಅವಕಾಶ ಇದೇನಾ ಎಂಬ ಪ್ರಶ್ನೆಗೆ, ಸಿದ್ದರಾಮಯ್ಯ ಇದ್ದಾರಲ್ಲರೀ ಎಂದರು.
ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಶೀಘ್ರದಲ್ಲೇ ಪಕ್ಷದಿಂದ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಿಂದ ಡಿಕೆ, ಡಿಕೆ, ಡಿ.ಕೆ. ಶಿವಕುಮಾರ್ ಎಂಬ ಘೋಷಣೆಗಳು ಕೇಳಿಬಂದವು