ನಾಳೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ನಡುವಣ 2ನೇ ಟಿ20 ಪಂದ್ಯವು ನಡೆಯಲಿದೆ.
Hubballi: ಭಾರತೀಯ ರೈಲ್ವೆ 150 ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ನವರಾತ್ರಿ ವಿಶೇಷ ಥಾಲಿ ಊಟ ಆರಂಭ!
ಪಂದ್ಯವು ಬಾಂಗ್ಲಾದೇಶ್ ತಂಡದ ಪಾಲಿಗೆ ನಿರ್ಣಾಯಕ. ಏಕೆಂದರೆ ಗ್ವಾಲಿಯರ್ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಟೀಮ್ ಇಂಡಿಯಾ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಹೀಗಾಗಿ ಎರಡನೇ ಪಂದ್ಯದ ಮೂಲಕ ಸರಣಿ ವಶಪಡಿಸಿಕೊಳ್ಳುವ ಉತ್ತಮ ಅವಕಾಶ ಭಾರತ ತಂಡದ ಮುಂದಿದೆ.
ಅತ್ತ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ಬಾಂಗ್ಲಾದೇಶ್ ತಂಡವು 2ನೇ ಪಂದ್ಯದಲ್ಲಿ ಜಯ ಸಾಧಿಸುವುದು ಅನಿವಾರ್ಯ. ಹೀಗಾಗಿ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.
ಅರುಣ್ ಜೇಟ್ಲಿ ಕ್ರೀಡಾಂಗಣದ ಪಿಚ್ ಬ್ಯಾಟರ್ಗಳ ಸ್ವರ್ಗ. ಈ ಮೈದಾನದಲ್ಲಿ ಸಣ್ಣ ಬೌಂಡರಿಗಳಿದ್ದು, ಹೀಗಾಗಿ ಇಲ್ಲಿ ಸಿಕ್ಸ್ ಮತ್ತು ಫೋರ್ಗಳನ್ನು ಸಹ ನಿರೀಕ್ಷಿಸಬಹುದು. ಇದಾಗ್ಯೂ ಈ ಮೈದಾನದಲ್ಲಿ ಸ್ಪಿನ್ನರ್ಗಳು ಗೇಮ್ ಚೇಂಜರ್ ಆಗಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಅತ್ಯುತ್ತಮ ಸ್ಪಿನ್ನರ್ಗಳನ್ನು ಹೊಂದಿರುವ ತಂಡವು ಪಂದ್ಯದ ಚಿತ್ರಣ ಬದಲಿಸಬಲ್ಲರು.
ಈ ಮ್ಯಾಚ್ನಲ್ಲಿ ಟಾಸ್ ಗೆಲ್ಲುವ ತಂಡ ಬೌಲಿಂಗ್ ಆಯ್ದುಕೊಳ್ಳುವ ಸಾಧ್ಯತೆ ಹೆಚ್ಚು. ಏಕೆಂದರೆ ಈ ಪಿಚ್ ಬ್ಯಾಟಿಂಗ್ಗೆ ಸಹಕಾರಿಯಾಗಿರುವ ಕಾರಣ ಚೇಸಿಂಗ್ ಮಾಡುವುದು ಸುಲಭ. ಅದರಲ್ಲೂ ಇಲ್ಲಿ ಆಡಲಾದ 7 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಚೇಸಿಂಗ್ ಮಾಡಿದ ತಂಡವು 4 ಬಾರಿ ಗೆದ್ದಿದೆ. ಹೀಗಾಗಿ ಟಾಸ್ ಗೆಲ್ಲುವ ತಂಡ ಬೌಲಿಂಗ್ ಆಯ್ದುಕೊಳ್ಳುವ ಸಾಧ್ಯತೆಯಿದೆ.
ಎಷ್ಟು ಗಂಟೆಗೆ ಪಂದ್ಯ ಶುರು?
ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಈ ಪಂದ್ಯವು ರಾತ್ರಿ 7 ಗಂಟೆಯಿಂದ ಶುರುವಾಗಲಿದೆ. ದೆಹಲಿಯಲ್ಲಿ ನಡೆಯಲಿರುವ ಈ ಮ್ಯಾಚ್ ಅನ್ನು ಸ್ಪೋರ್ಟ್ಸ್ 18 ಚಾನೆಲ್ ಹಾಗೂ ಜಿಯೋ ಸಿನಿಮಾ ಆ್ಯಪ್ಗಳಲ್ಲಿ ಲೈವ್ ವೀಕ್ಷಿಸಬಹುದು.