ಬೆಂಗಳೂರು:- ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬೀಳೊ ಹಂತದಲ್ಲಿರುವ ಸ್ಯಾಟ್ಲೈಟ್ ನಿಲ್ದಾಣದ ಶೀಟ್ಗಳು: ಪ್ರಯಾಣಿಕರಲ್ಲಿ ಆತಂಕ!
ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಬಹುತೇಕ ಕಡೆ ಒಣಹವೆ ಇರಲಿದೆ.
ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಶುಭ್ರ ಆಕಾಶವಿದ್ದು, ಬಿಸಿಲಿದೆ, ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.