ನವದೆಹಲಿ: ಬಿಜೆಪಿಗೆ ಸತತ ಮೂರನೇ ಬಾರಿಗೆ ಅಧಿಕಾರ ನೀಡಿ ಹರಿಯಾಣ ರಾಜ್ಯ ಇತಿಹಾಸ ಬರೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿಜಯೋತ್ಸವದ ವೇಳೆ ಮಾತನಾಡಿದ ಮೋದಿ, ಹರಿಯಾಣದ ಜನರು ಮತ್ತೊಮ್ಮೆ ಕಮಾಲ್ ಮಾಡಿದ್ದಾರೆ.
ಕಮಲ್ ಕಮಲ್ ಮಾಡಿದ್ದಾರೆ. ತಾಯಿ ಕಾತ್ಯಾಯಿನಿ ಆರಾಧ್ಯನೆಯ ದಿನ. ಕ್ಯಾತಯಿನಿ ದೇವಿ ಕೈಯಲ್ಲಿ ಕಮಲದ ಹೂವಿದೆ. ಇಂತಹ ಪಾವನ ದಿನದಂದು ಹರಿಯಾಣದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಪಕ್ಷ ಬಂದಿದೆ. ಗೀತಾದ ನೆಲದಲ್ಲಿ ವಿಕಾಸದ ಗೆಲವು ಬಂದಿದೆ. ಎಲ್ಲ ಜಾತಿ ವರ್ಗದ ಜನರು ನಮಗೆ ಮತ ನೀಡಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಶಾಂತಿಯುತ ಮತದಾನ ನಡೆದಿದೆ. ಇದು ಭಾರತ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಜಯವಾಗಿದೆ ಎಂದು ಬಣ್ಣಿಸಿದ್ದಾರೆ.
ನವರಾತ್ರಿಯ 7ನೇ ದಿನ “ದೇವಿ ಕಾಲರಾತ್ರಿ” ಪೂಜೆ ಮಾಡಿ ಬದುಕಿನಲ್ಲಿ ಪೂರ್ಣಪ್ರಮಾಣದ ಅಭಿವೃದ್ಧಿ ಪಡೆಯಿರಿ.!
ಜಮ್ಮು ಕಾಶ್ಮೀರ ಜನರು ಎನ್ಸಿ ಒಕ್ಕೂಟಕ್ಕೆ ಹೆಚ್ಚು ಸ್ಥಾನ ನೀಡಿದ್ದಾರೆ. ಅವರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ಎಷ್ಟು ಪಕ್ಷಗಳು ಚುನಾವಣಾ ಅಖಾಡದಲ್ಲಿದ್ದವು, ಅದರಲ್ಲಿ ಬಿಜೆಪಿ ಹೆಚ್ಚು ಮತ ಪಡೆದಿದೆ. ಅಲ್ಲಿ ಗೆಲವು ಸಾಧಿಸಿದ ಜನರಿಗೆ ಅಭಿನಂದನೆ ಹೇಳುತ್ತೇನೆ. ಎರಡು ರಾಜ್ಯದ ನಮ್ಮ ಕಾರ್ಯಕರ್ತರಿಗೆ ಧನ್ಯವಾದ ಹೇಳ್ತೀವಿ. ಇದು ಕಾರ್ಯಕರ್ತರ ಶ್ರಮದಿಂದ ಗೆಲುವು ಸಾಧ್ಯವಾಗಿದೆ. ನಡ್ಡಾ ಅವರ ತಂಡದ ಗೆಲುವಾಗಿದೆ. ನಮ್ಮ ಸಿಎಂ ಕರ್ತವ್ಯದ ಜಯವಾಗಿದೆ ಎಂದು ಹೊಗಳಿದ್ದಾರೆ.